Breaking News

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.100 ರಷ್ಟು ಸಿಗಲಿವೆ ಔಷಧಿಗಳು : ಗುಂಡೂರಾವ್

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ಒದಗಿಸಬೇಕು. ಆ ನಿಟ್ಟಿನಲ್ಲಿ ಔಷಧಿಗಳು ಸೇರಿದಂತೆ ಶೇ.100 ರಷ್ಟು ಔಷಧಿಗಳು ದೊರೆಯುವಂತಾಗಲು ಪ್ರಯತ್ನಿಸಲಾಗಿದೆ. ಇನ್ನು ಮೂರು ನಾಲ್ಕು ತಿಂಗಳಲ್ಲಿ ಶೇ.100 ರಷ್ಟು ಗುರಿ ತಲುಪಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಅವರು ಹೇಳಿದರು.     ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಿ ಸುಮಾರು 800 ಯಂತ್ರಗಳನ್ನು ಅಳವಡಿಸಲಾಗಿದೆ. ಹೊಸ ತಾಲ್ಲೂಕು ಕೇಂದ್ರಗಳಲ್ಲಿಯೂ ಸಹ ಆರೋಗ್ಯಕ್ಕೆ …

Read More »

ಐವರನ್ನು ಡಿಸಿಎಂ ಮಾಡಿ: ಡಿಕೆ ವ್ಯಂಗ್ಯ

ಬೆಂಗಳೂರು: “ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷ ತೀರ್ಮಾನ ಮಾಡಿ, ಇನ್ನೂ ಐದು ಜನರನ್ನು ಮಾಡಿದರೆ ಒಳ್ಳೆಯದು’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಪ್ರತಿಕ್ರಿಯೆ ನೀಡಿ, ಐದು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಪ್ರಸ್ತಾವ ಮಾಡಿದ್ದಾರೆ. ಹೆಚ್ಚುವರಿ ಡಿಸಿಎಂ ಮಾಡಿದರೆ ಡಿ.ಕೆ. ಶಿವಕುಮಾರ್‌ ಅವರ ಬಲ ಕುಗ್ಗಿದಂತೆ …

Read More »

ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: -ಲಕ್ಷ್ಮೀ ಹೆಬ್ಬಾಳ್ಕರ್‌,

ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತ ಸ್ತರಕ್ಕೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಜತೆಗೆ ಸಭೆ ನಡೆಸಿದ ಬಳಿಕ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚಿಸಿದ್ದಾರೆ …

Read More »

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

ಬೆಂಗಳೂರು: ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರಕಾರದ ವಿರುದ್ಧ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಆಯೋಗ ಸಲ್ಲಿಸಿರುವ ಈ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.   ಈ ವೇಳೆ ರಾಜ್ಯ ಚುನಾವಣ …

Read More »

ಮಂಚೂರಿ, ಬಾಂಬೇ ಮಿಠಾಯಿ ಬಳಿಕ ಕಬಾಬ್‌ಗೂ ನಿಷೇಧ

ಬೆಂಗಳೂರು: ರಾಜ್ಯಾ ದ್ಯಂತ ವೆಜ್‌ ಕಬಾಬ್‌, ಕೋಳಿ ಹಾಗೂ ಮೀನಿನ ಕಬಾಬ್‌ ತಯಾರಿಗೆ ಕೃತಕ ಬಣ್ಣ ಉಪಯೋಗಿಸುವುದನ್ನು ನಿಷೇ ಧಿಸಿ ರಾಜ್ಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಇಲಾಖೆ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ ಜೀವಾವಧಿವರೆಗೆ ಜೈಲು ಶಿಕ್ಷೆಯ ಎಚ್ಚರಿಕೆಯನ್ನೂ ನೀಡಲಾಗಿದೆ.   ಕೋಳಿ ಕಬಾಬ್‌ಗಳಲ್ಲಿ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗುವ ದುಷ್ಪರಿ ಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ, ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ …

Read More »

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

ಬೆಂಗಳೂರು: ಮುಂದಿನ 3 ದಿನಗಳಲ್ಲಿ ಅಸುರಕ್ಷಿತ ಮಸಾಲಪೂರಿ ಹಾಗೂ ಪಾನಿಪೂರಿ ಮಾರಾಟ ವನ್ನು ರಾಜ್ಯಾದ್ಯಂತ ನಿಷೇಧ ಮಾಡಲಾಗುತ್ತದೆಯೇ? ಅಂಥದ್ದೊಂದು ತೂಗುಕತ್ತಿ ಈ ಮಸಾಲಾ ತಿಂಡಿಗಳ ಮೇಲಿದೆ. ಇದಕ್ಕೆ ಬಳಸುವ ಕೆಮಿಕಲ್‌ ಸಾಸ್‌ ಮಕ್ಕಳ ಜೀರ್ಣಾಂಗದ ಮೇಲೂ ಪರಿಣಾಮ ಬೀರಿ, ಹೈಪರ್‌ ಆಕ್ವಿವ್‌ನೆಸ್‌ ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ. ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಅಸುರಕ್ಷಿತ ಗೋಬಿ ಹಾಗೂ ಕಾಟನ್‌ ಕ್ಯಾಂಡಿಗಳ …

Read More »

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ

ನವದೆಹಲಿ: ಎಂಟನೆಯ ವೇತನ ಆಯೋಗ ರಚಿಸಬೇಕು, ವೇತನ ಪಡೆಯುವ ವರ್ಗದವರಿಗೆ ಆದಾಯ ತೆರಿಗೆ ವಿನಾಯಿತಿ ಹೆಚ್ಚು ಮಾಡಬೇಕು ಮತ್ತು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕು ಎನ್ನುವ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮುಂದಿರಿಸಿದ್ದಾರೆ. ನಿರ್ಮಲಾ ಅವರು ಕೇಂದ್ರ ಬಜೆಟ್‌ಗೆ ಪೂರ್ವಭಾವಿಯಾಗಿ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಸೋಮವಾರ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಮಾಲೀಕತ್ವದ ಉದ್ದಿಮೆಗಳ ಖಾಸಗೀಕರಣವನ್ನು ಸ್ಥಗಿತಗೊಳಿಸಬೇಕು …

Read More »

ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು;ಆರ್.ಬಿ.ತಿಮ್ಮಾಪುರ

ಬಾಗಲಕೋಟೆ: ‘ವಿಶೇಷ ಔಷಧ ಗುಣಗಳುಳ್ಳ ತರಕಾರಿಗಳತ್ತ ಜನರು ವಾಲುತ್ತಿದ್ದಾರೆ. ಅಂತಹ ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ತೋಟಗಾರಿಕೆ ಸಂಶೋಧನಾ ವಿಸ್ತರಣಾ ಕೇಂದ್ರದಿಂದ ಮುಖ್ಯ ಆವರಣದಲ್ಲಿ ಸೋಮವಾರದಿಂದ ಆರಂಭವಾದ ಮೂರು ದಿನಗಳ ಸಸ್ಯ ಸಂತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ತರಕಾರಿ ಬೆಳೆಗಳಿಗೆ ವಿಷಕಾರಿ ಔಷಧ ಉಪಯೋಗಿಸುವುದು ವಾಡಿಕೆಯಾಗಿದೆ. ಜವಾರಿ ಎನಿಸಿಕೊಂಡ ಜೋಳ ಕೂಡ …

Read More »

ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಮಹಿಳೆಯರ ಆಗ್ರಹ: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ

ದೇವರಹಿಪ್ಪರಗಿ: ಪಟ್ಟಣ, ದೇವೂರ ಗ್ರಾಮ ಸೇರಿದಂತೆ ತಾಲ್ಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟ ಹಾಗೂ ಪಾನ್‌ ಶಾಪ್‌ಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಎಂಬ ಮಾದಕ ಪದಾರ್ಥ ಮಾರಾಟ ತಡೆಯಬೇಕೆಂದು ಮಹಿಳೆಯರು ಆಗ್ರಹಿಸಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿಗೆ ಸೋಮವಾರ ದೇವೂರ ಹಾಗೂ ವಿವಿಧ ಗ್ರಾಮಗಳ ಮಹಿಳೆಯರು ಆಗಮಿಸಿ, ತಹಶೀಲ್ದಾರ್‌ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು. ರೇಣುಕಾ ಪಾಟೀಲ ಮಾತನಾಡಿ, ಪಟ್ಟಣದ ಹಲವು ಅಂಗಡಿ ಹಾಗೂ ದೇವೂರ ಗ್ರಾಮದ ವಿವಿಧೆಡೆ ಮದ್ಯ …

Read More »

ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ?ತಿಮ್ಮಾಪುರ

ಬಾಗಲಕೋಟೆ: ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ? ಪ್ರಜ್ವಲ್ ಮತ್ತು ಸೂರಜ್ ಆ ಕೆಲಸ ಮಾಡಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅವದರೂ ಹೇಳಲಿ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು. ನಗರದಲ್ಲಿ ಕೆಡಿಪಿ ಸಭೆಯ ಮುಂಚೆ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ ಎಚ್ ಡಿಡಿ ಕುಟುಂಬ ಮುಗಿಸಲು ಹುನ್ನಾರ ನಡಿತಿದೆಯೆಂಬ ಎಚ್ ಡಿಕೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಎಚ್ ಡಿಕೆ ಕೇಂದ್ರ …

Read More »