ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ರಾಹುಲ್ ಜಾರಕಿಹೊಳಿ ಆಯ್ಕೆ: ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಕೆ
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿಯಾಗಿ ರಾಹುಲ್ ಸತೀಶ್ ಜಾರಕಿಹೊಳಿ ಅವರು ಆಯ್ಕೆಯಾಗಿದ್ದಾರೆ.
ಸೋಮವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅಪೆಕ್ಸ್ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ರಾಹುಲ್ ಜಾರಕಿಹೊಳಿ ಅವರು ಚುನಾವಣಾಧಿಕಾರಿಗಳಿಗೆ ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು
. ಈ ಸಂದರ್ಭದಲ್ಲಿ ರಾಜ್ಯದ ಹಿರಿಯ ನಾಯಕರು ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.ನಾಮಪತ್ರ ಸಲ್ಲಿಕೆಯ ವೇಳೆ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ಕೆ.ಎನ್. ರಾಜಣ್ಣ, ಮಾಜಿ ಸಚಿವರಾದ ವೀರಕುಮಾರ್ ಪಾಟೀಲ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಸೇರಿದಂತೆ ಸಹಕಾರ ಕ್ಷೇತ್ರದ ಪ್ರಮುಖರು ಮತ್ತು ಅನೇಕ ಗಣ್ಯರು ಭಾಗವಹಿಸಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, “ರಾಜ್ಯದ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಮತ್ತು ರೈತರ ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಗೆ ಶಕ್ತಿಯಾಗಿ ನಿಲ್ಲುವ ಉದ್ದೇಶ ನನ್ನದಾಗಿದೆ.
ಈ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನನ್ನ ಈ ಪ್ರಯತ್ನಕ್ಕೆ ಹಿರಿಯರ ಮಾರ್ಗದರ್ಶನ ಹಾಗೂ ಎಲ್ಲರ ಆಶೀರ್ವಾದ ಸದಾ ಇರಲಿ,” ಎಂದು ವಿನಂತಿಸಿದರು.
ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಅಪೆಕ್ಸ್ ಬ್ಯಾಂಕ್‌ಗೆ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ರಾಹುಲ್ ಜಾರಕಿಹೊಳಿ ಅವರ ಈ ಹೆಜ್ಜೆ ಜಿಲ್ಲೆಯ ಸಹಕಾರಿ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.
Laxmi News 24×7