ಸೊರಬ: ತಾಲೂಕಿನ ಎನ್. ದೊಡ್ಡೇರಿ ಗ್ರಾಮದಲ್ಲಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಗುರುವಾರ ತಡರಾತ್ರಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.
ಎನ್. ದೊಡ್ಡೇರಿ ಗ್ರಾಮದ ಹನುಮಂತಪ್ಪ ಎಂಬುವವರನ್ನು ರಕ್ಷಿಸಲಾಗಿದೆ.
ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಹನುಮಂತಪ್ಪ ಅವರನ್ನು ರಕ್ಷಿಸಿಲಾಗಿದ್ದು, ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಕೆ. ಮಹಾಬಲೇಶ್ವರ, ಚಾಲಕ ತಂತ್ರಜ್ಞ. ಕೆ.ಎನ್. ಪ್ರಶಾಂತ್, ಪ್ರಮುಖ ಅಗ್ನಿಶಾಮಕ ಎಂ.ಆರ್. ಮಂಜುನಾಥ್, ಸಿಬ್ಬಂದಿ ಎನ್.ಜಿ. ಪ್ರದೀಪ, ಎನ್. ಪರಶುರಾಮಪ್ಪ, ಎಚ್.ಎನ್. ಪ್ರಸನ್ನ ಕುಮಾರ್ ಪಾಲ್ಗೊಂಡಿದ್ದರು.
Laxmi News 24×7