Breaking News

ಎಂಇಎಸ್​​​​ನಿಂದ ನ.1ರಂದು ಕರಾಳ ದಿನಾಚರಣೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Spread the love

ಬೆಂಗಳೂರು: ಬೆಳಗಾವಿ ಅಥವಾ ಇತರ ಯಾವುದೇ ಕನ್ನಡ ಮಾತನಾಡುವ ಪ್ರದೇಶದಲ್ಲಿ ಕನ್ನಡ ರಾಜ್ಯೋತ್ಸವ (ನವೆಂಬರ್ 01) ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಚರಿಸುವ ಕರಾಳ ದಿನ ವನ್ನು ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೆಳಗಾವಿಯ ಮಲ್ಲಪ್ಪ ಛಾಯಪ್ಪ ಅಕ್ಷರದ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಪೂಣಚ್ಚ ಅವರ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಅಲ್ಲದೇ, ಕೆಲವು ವ್ಯಕ್ತಿಗಳ ಅಥವಾ ಸಂಘಟನೆಗಳ ಮರವಣಿಗೆ ಅಥವಾ ಪ್ರತಿಭಟನೆ ನಡೆಸುವುದನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಲಾಗುವುದಿಲ್ಲ ಎಂದು ತಿಳಿಸಿದ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥ ಪಡಿಸಿ ಆದೇಶಿಸಿತು. ಆದರೆ, ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಅನುಮತಿ ಪಡೆದ ನಂತರವೇ ಎಂಇಎಸ್ ಯಾವುದೇ ಮೆರವಣಿಗೆ/ಪ್ರತಿಭಟನೆ/ ರ್‍ಯಾಲಿಯನ್ನು ಆಯೋಜಿಸಬಹುದು ಎಂದು ನ್ಯಾಯಪೀಠ ಸ್ಪಷ್ಟ ಪಡಿಸಿದೆ.

2025ರ ನವೆಂಬರ್ 01 ರಂದು ನಡೆಯುವ ಯಾವುದೇ ಪ್ರತಿಭಟನೆಗಳಿಂದ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳ ಲಾಗುವುದು ಎಂದು ರಾಜ್ಯ ಸರ್ಕಾರ ಭರವಸೆಯನ್ನು ನೀಡಿದೆ ಎಂಬ ಅಂಶವನ್ನು ನ್ಯಾಯಾಲಯದ ದಾಖಲಿಸಿದೆ. ಈ ರ್‍ಯಾಲಿಯ ಸಮಯದಲ್ಲಿ ಯಾವುದೇ ವ್ಯಕ್ತಿ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದರೆ, ರಾಜ್ಯವು ಆ ವ್ಯಕ್ತಿಗಳ ಮೇಲೆ ಪೂರ್ಣ ಪ್ರಮಾಣದಲ್ಲಿ ಮೊಕದ್ದಮೆ ಹೂಡಿ ಕಾನೂನುಕ್ರಮ ಜರುಗಿಸಬೇಕು ಎಂದು ಇದೇ ವೇಳೆ ನ್ಯಾಯಾಲಯ ಸೂಚನೆ ನೀಡಿದೆ.

ಉದ್ದೇಶಿತ ಪ್ರತಿಭಟನೆಯು ಸಾರ್ವಜನಿಕ ಶಾಂತಿಯನ್ನು ಭಂಗಗೊಳಿಸುತ್ತದೆ, ಕನ್ನಡ ಮಾತನಾಡುವ ನಾಗರಿಕರು ತಮ್ಮ ರಾಜ್ಯದ ಸಂಸ್ಥಾಪನಾ ದಿನವನ್ನು ಶಾಂತಿಯುತವಾಗಿ ಆಚರಿಸುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.


Spread the love

About Laxminews 24x7

Check Also

: ಪರಿಹಾರ ಹಣಕ್ಕಾಗಿ ಪಂಚ ಗ್ಯಾರಂಟಿ, ಐಪಿ ಸೆಟ್ ಸಹಾಯಧನ ಕಡಿತ?

Spread the loveಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಯಡಿಯ ಭೂಸ್ವಾಧೀನ, ಪುನರ್ವಸತಿಗಾಗಿ ಪರಿಹಾರ ದರ ನಿಗದಿ ಮಾಡಿ ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ