ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನೇತ್ರಾ ಚಿಕಿತ್ಸಕಿಯಾಗಿರುವ ಡಾ. ಸವಿತಾ 6 ಸಾವಿರ ಹಣ ಲಂಚ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ತುಮಕೂರಿನ ಉಪ್ಪಾರಹಳ್ಳಿ ನಿವಾಸಿ ಅವಿನಾಶ್ ಎಂಬುವವರ ತಾಯಿ ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಈ ಸಂಬಂಧ ಲೋಕಾಯಕ್ತಕ್ಕೆ ಅವಿನಾಶ್ ದೂರು ನೀಡಿದ್ದರು. ಇಂದು ಮಧ್ಯಾಹ್ನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮನೋಜ್ ಎಂಬಾತನ ಮೂಲಕ 6 ಸಾವಿರ ಲಂಚದ ಹಣ ಲಂಚ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಲೋಕಾ ಟೀಮ್ ಹಿಡಿದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸದ್ಯ ಡಾ. ಸವಿತಾ ಹಾಗೂ ಆಸ್ಪತ್ರೆ ಸಿಬ್ಬಂದಿ ಮನೋಜ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Laxmi News 24×7