ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಣ್ಣ ನಿವಾಸದಲ್ಲಿನ ಔತಣ ಕೂಟ ರಾಜಕಾರಣ ಹಿನ್ನೆಲೆಯದ್ದು, ಇತ್ತ ಕಬ್ಬಿನ ದರಕ್ಕಾಗಿ ಸಭೆ, ಅತ್ತ ಔತಣಕೂಟ ಮಾಡ್ತಾರೆ.
ರೈತರು, ಶುಗರ್ ಫ್ಯಾಕ್ಟರಿ ಮಾಲೀಕರನ್ನ ಸಭೆಗೆ ಕರೀತಿರಿ, ಕೇವಲ ಅರ್ಧ ಗಂಟೆ ಸಭೆ ಮಾಡಲು ಸಾಧ್ಯವಾಗುತ್ತಾ? ರಾಜಣ್ಣ ಅವರಿಗೆ ಮೊದಲೇ ಬರಲು ಆಗಲ್ಲ ಅಂತ ಹೇಳಬೇಕಿತ್ತು. ಸಭೆ ನಡೆಸಬೇಕು ಅಂತ ಗಟ್ಟಿಯಾಗಿ ಹೇಳಬೇಕಿತ್ತು. ಅದನ್ನು ಬಿಟ್ಟು ಕೊನೆ ಗಳಿಗೆಯಲ್ಲಿ ಔತಣಕೂಟ ರದ್ದು ಮಾಡಿದ್ದಾರೆ ಎಂದರು.
ನವೆಂಬರ್ ಕ್ರಾಂತಿ ಬಗ್ಗೆ ಬಿಜೆಪಿ ನಾಯಕರು ಹೇಳಿಲ್ಲ. ನಿನ್ನೆ ಔತಣ ಕೂಟ ಕರೆದವರೇ ಹೇಳಿದ್ದು, ಕ್ರಾಂತಿ ಆಗುತ್ತೋ, ಬ್ರಾಂತಿ ಆಗುತ್ತೋ ಗೊತ್ತಿಲ್ಲ.
ಆದರೆ ಏನೋ ಒಂದು ಆಗೇ ಆಗುತ್ತೆ. ನವೆಂಬರ್ ಅಂತ್ಯದಲ್ಲಿ ರಾಜಕೀಯ ಬದಲಾವಣೆ ಆಗುತ್ತದೆ.
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಅನ್ನೋ ಮನೋಭಾವದಲ್ಲಿ ಅವರ ಹಿಂಬಾಲಕರು ಇದ್ದಾರೆ. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಇರ್ತಾರೆ ಅಂತ ಡಿಕೆಶಿ ಬಹಿರಂಗವಾಗಿ ಹೇಳಲಿ.
ಹೇಳಿಲ್ಲ ಅಂದ್ರೆ ನಾಯಕತ್ವ ಬದಲಾವಣೆಯ ಕೆಲಸ ನಡೀತಾ ಇದೆ ಅಂತ ಅರ್ಥ. ಇದೆ ರೀತಿ ಮುಂದುವರೆದರೆ ಸರ್ಕಾರ ಪತನ ಆಗೋದು ಖಚಿತ ಎಂದರು.
Laxmi News 24×7