Breaking News

ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ.

Spread the love

ನವದೆಹಲಿ: ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ.

ಪ್ರತಿ ಕ್ವಿಂಟಲ್​ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (Fair and Remunerative Price – FRP)ಯನ್ನು 10 ರೂಪಾಯಿ ಹೆಚ್ಚಳ ಮಾಡಿದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು 315 ರೂ.ಗೆ ನಿಗದಿ ಮಾಡಿದೆ. ಇದಕ್ಕೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಕ್ಟೋಬರ್‌ನಿಂದ ಪ್ರಾರಂಭವಾಗುವ 2023- 24ರ ಹಂಗಾಮಿಗೆ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ ಕನಿಷ್ಠ ಬೆಲೆ ಇದಾಗಿದೆ. ಕಬ್ಬಿನ ಎಫ್‌ಆರ್‌ಪಿಯನ್ನು ಪ್ರತಿ ಕ್ವಿಂಟಲ್​ಗೆ 10 ರೂಪಾಯಿ ಹೆಚ್ಚಳ ಮಾಡಿದ್ದು, 2022-23ರ ಮಾರುಕಟ್ಟೆ ವರ್ಷಕ್ಕೆ ಹೋಲಿಸಿದರೆ ಶೇ.3.28ರಷ್ಟು ಏರಿಕೆಗೊಂಡಂತೆ ಆಗಿದೆ.

ಸಂಪುಟ ಸಭೆ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, 2023- 24ನೇ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಲ್‌ಗೆ 315 ರೂ.ಗೆ ಸಚಿವ ಸಂಪುಟ ಹೆಚ್ಚಿಸಿದೆ. ಕಳೆದ ವರ್ಷ ಕಬ್ಬಿನ ಎಫ್‌ಆರ್‌ಪಿ ಪ್ರತಿ ಕ್ವಿಂಟಲ್‌ಗೆ 305 ರೂ. ಇತ್ತು. ಪ್ರಧಾನಿಯವರು ಸದಾ ಅನ್ನದಾತರ ಜೊತೆಗಿದ್ದು, ಸರ್ಕಾರ ಕೃಷಿ ಮತ್ತು ರೈತರಿಗೆ ಆದ್ಯತೆ ನೀಡಿದೆ ಎಂದರು.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ