ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ.
ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Laxmi News 24×7