ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ
ಖಾನಾಪೂರ ತಾಲೂಕಿನ ಗೋಲಿಹಳ್ಳಿ ಗ್ರಾಮದಲ್ಲಿ ನೆಲೆಯೂರಿರುವ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಹಾಗೂ ನಂದಿ ಮೂರ್ತಿಯ ಪ್ರತಿಷ್ಠಾಪನೆ ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು.
ಈ ಧಾರ್ಮಿಕ ಕಾರ್ಯಕ್ರಮವನ್ನು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ್ ಪಾಟೀಲ ಅವರ ನೇತೃತ್ವದಲ್ಲಿ ಭಕ್ತಿಭಾವದಿಂದ ಜರುಗಿತು.
ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ-ಪುನಸ್ಕಾರಗಳು ಕೈಗೊಂಡು, ಶ್ರದ್ಧಾ ಗೌರವದಿಂದ ಶಿವಮೂರ್ತಿಯ ಪ್ರತಿಷ್ಠಾಪನೆಯು ನೇರವೇರಿತು.
ಈ ಸಂದರ್ಭ ಅರವಿಂದ್ ಪಾಟೀಲರನ್ನು ದೇವಸ್ಥಾನದ ಪಂಚ ಕಮಿಟಿಯ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಆತ್ಮೀಯವಾಗಿ ಸತ್ಕರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಭಕ್ತಾದಿಗಳು ಬಹುಸಂಖ್ಯೆಯಲ್ಲಿ ಭಾಗವಹಿಸಿದ್ದರು.