Breaking News

ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿ: ಡಾ.ಭೀಮಶಿ ಜಾರಕಿಹೊಳಿ

Spread the love

ಬೆಳಗಾವಿ: ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದ್ದು, ಅದರ ಭಾಗವಾಗಿ ಗುಂಪು ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಹೇಳಿದರು.

ನಗರದ ವಾರ್ತಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಸಾಲಿನ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಕರ್ತರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಈ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದರು.

ನಾವೆಲ್ಲರೂ ವೈಮಸ್ಸನ್ನು ಬಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ಪತ್ರಕರ್ತರ ಹಿತಾಸಕ್ತಿಗಾಗಿ ಸಂಘವನ್ನು ನೂತನ ಶಕ್ತಿಯೊಂದಿಗೆ ಮುಂದೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತದೆ  ನಮ್ಮ ಸಂಘವನ್ನು ಮತ್ತಷ್ಟು ಸಂಘಟನೆ ಮಾಡಬೇಕಿದೆ. ಎಲ್ಲ ಸದಸ್ಯರು ಒಂದಾಗಿ ಕೆಲಸ ಮಾಡುವ ಮೂಲಕ ಸಂಘದ ಬಲವನ್ನು ವೃದ್ಧಿಸೋಣ. ಸಂಘಕ್ಕೆ ಬೆಳಗಾವಿಯಲ್ಲಿ ಪತ್ರಿಕಾ ಭವನದ ಕಟ್ಟಡ ಅತ್ಯವಶ್ಯಕವಾಗಿದ್ದು, ಅದರ ನಿರ್ಮಾಣದ ನಿಟ್ಟಿನಲ್ಲಿ ಶ್ರಮಿಸುತ್ತೇವೆ.

ಈಗಾಗಲೇ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಮುಂಬರುವ ದಿನಗಳಲ್ಲಿ ತಾಲೂಕು ಮಟ್ಟದ ಸಮಿತಿಯನ್ನೂ ರಚಿಸಲಾಗುವುದು. ಈ ಮೂಲಕ ಸಂಘಟನೆಗೆ ಮೂಲಬಲ ಒದಗಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ