Home / ರಾಜಕೀಯ / ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? -ಆರ್‌ಜಿವಿ ವಿರುದ್ಧ ಬಿಜೆಪಿ ದೂರು

ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? -ಆರ್‌ಜಿವಿ ವಿರುದ್ಧ ಬಿಜೆಪಿ ದೂರು

Spread the love

ಹೈದರಾಬಾದ್: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಬಿಜೆಪಿ ದೂರು ದಾಖಲಿಸಿದೆ.

‘ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಎಲ್ಲಕ್ಕಿಂತ ಮುಖ್ಯವಾಗಿ ಕೌರವರು ಯಾರು’ ಎಂದು ಪ್ರಶ್ನಿಸಿ ಶುಕ್ರವಾರ ವರ್ಮಾ ಟ್ವೀಟ್ ಮಾಡಿದ್ದರು.

ಈ ಟ್ವೀಟ್‌ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ, ರಾಮ್ ಗೋಪಾಲ್ ವರ್ಮಾ ವಿರುದ್ಧ ಎಸ್‌ಸಿ -ಎಸ್‌ಟಿ ಕಾನೂನಿನ ಅಡಿಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ತೆಲಂಗಾಣ ಬಿಜೆಪಿಯ ಹಿರಿಯ ನಾಯಕ ಜಿ. ನಾರಾಯಣರೆಡ್ಡಿ ಅಬಿಡ್‌ ರೋಡ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

‘ನಾವು ದೂರು ಸ್ವೀಕರಿಸಿದ್ದು, ಕಾನೂನಿನ ಅಭಿಪ್ರಾಯ ಕೇಳಿದ್ದೇವೆ. ಕಾನೂನು ಅಭಿಪ್ರಾಯ ಸ್ವೀಕರಿಸಿದ ಬಳಿಕ ವರ್ಮಾ ವಿರುದ್ಧ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ’ ಎಂದು ಅಬಿಡ್‌ ರೋಡ್‌ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್ ಬಿ.ಪ್ರಸಾದ್ ರಾವ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ