Breaking News

ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ – ಗೃಹಿಣಿ ನೇಣಿಗೆ ಶರಣು

Spread the love

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಗೃಹಿಣಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು) ಹೊರವಲಯ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ  ನಡೆದಿದೆ.

ರಂಜಿತಾ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ. ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮೃತ ರಂಜಿತಾ 10 ವರ್ಷಗಳ ಹಿಂದೆ ಅರುಣ್ ಎಂಬುವವರ ಜೊತೆ ಮದುವೆಯಾಗಿದ್ದರು. ಗುಲ್ಬರ್ಗಾ ನಿವಾಸಿಗಳಾದ ದಂಪತಿ ಕಳೆದ 5 ವರ್ಷದಿಂದ ನೆಲಮಂಗಲದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ 1 ವರ್ಷದ ಹಿಂದೆ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದಿದ್ದ ರಂಜಿತಾ ಲಕ್ಷಾಂತರ ರೂ. ಹಣ ಕಳೆದುಕೊಂಡಿದ್ದರು. ಅಲ್ಲದೇ ರಂಜಿತಾಳ ತಾಯಿ ಹಾಗೂ ಗಂಡ ಈಗಾಗಲೇ ಸುಮಾರು 15 ಲಕ್ಷ ರೂ. ಸಾಲ ತೀರಿಸಿದ್ದರು. ಇಷ್ಟಾದರೂ ಕೂಡ ಆನ್‌ಲೈನ್ ಗೇಮಿಂಗ್ ಬಿಟ್ಟಿರಲಿಲ್ಲ. ಮತ್ತೆ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ

2 ದಿನದ ಹಿಂದೆ ಮೃತಳ ಪತಿ ಅರುಣ್ ಗುಲ್ಬರ್ಗಾಕ್ಕೆ ಕೆಲಸ ನಿಮಿತ್ತ ತೆರಳಿದ್ದರು. ಈ ವೇಳೆ ಮನೆಯಲ್ಲಿ 7 ವರ್ಷದ ಮಗನ ಜೊತೆ ಇದ್ದ ರಂಜಿತಾ ಕಳೆದ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನೆಲಮಂಗಲ ಸರ್ಕಾರಿ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಈ ಸಂಬAಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?

Spread the loveಬೆಂಗಳೂರು: ಕತ್ರಿಗುಪ್ಪೆಯ ಕಾಮಾಕ್ಯ ಎಲೆಕ್ಟ್ರಿಕಲ್ ಡಿಪೋ 13ರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಪ್ರತಿಭಟನೆ ನಡೆಸಿದ್ದಾರೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ