ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್
ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ
36 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ
ದಶಕಗಳ ನೈರ್ಮಲ್ಯ ಸಮಸ್ಯೆಗೆ ಶಾಶ್ವತ ಮುಕ್ತಿ
ಶಾಸಕರ ಪರವಾಗಿ ಚಾಲನೆ ನೀಡಿದ ಅಮಾನ್ ಸೇಠ್
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ನೂತನ ಯುಜಿಡಿ ವ್ಯವಸ್ಥೆಯಿಂದಾಗಿ ಈ ಭಾಗದ ನಿವಾಸಿಗಳ ದಶಕಗಳ ಕಾಲದ ನೈರ್ಮಲ್ಯ ಮತ್ತು ಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ.
ಕಾಮಗಾರಿ ಆರಂಭದ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಅಮಾನ್ ಸೇಠ್, ಕ್ಷೇತ್ರದ ನಾಗರಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಲು ಶಾಸಕರು ಬದ್ಧರಾಗಿದ್ದಾರೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ತಮ್ಮ ಭಾಗದ ಪ್ರಮುಖ ಸಮಸ್ಯೆಯಾಗಿದ್ದ ಒಳಚರಂಡಿ ಯೋಜನೆ ಈಗ ಅನುಷ್ಠಾನಕ್ಕೆ ಬರುತ್ತಿರುವುದಕ್ಕೆ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದು, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Laxmi News 24×7