ಬೆಳಗಾವಿ ಜಿಲ್ಲೆಯಾದ್ಯಾಂತ ಆದ ಭಾರಿ ಮಳೆಯಿಂದಾಗಿ ರೈತರ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಬೆಳೆಹಾನಿಗೆ ಎಕರೆಗೆ ₹25,000 ಪರಿಹಾರ ನೀಡುವಂತೆ ಭಾರತೀಯ ಕಿಸಾನ್ ಸಂಘ, ಕರ್ನಾಟಕ ಪ್ರದೇಶ ಬೆಳಗಾವಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಭಾರತೀಯ ಕಿಸಾನ್ ಸಂಘ, ಕರ್ನಾಟಕ ಪ್ರದೇಶ ಬೆಳಗಾವಿ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಜಿಲ್ಲಾ ಅಧ್ಯಕ್ಷ ಶಿವಾನಂದ ಸರದಾರ ಮಾತನಾಡುತ್ತಾ,ಪ್ರತೀ ವರ್ಷವಂತೆಯೇ ಈ ವರ್ಷವೂ ಜಿಲ್ಲೆಯಾದ್ಯಂತ ಅತೀವೃಷ್ಟಿ ಉಂಟಾಗಿ, ಉದ್ದು, ಹೇಸರು, ಗೋವಿನ ಜೋಳ, ಸೋಯಾಬೀನ್ ಮತ್ತು ಹಣ್ಣಿನಂತಹ ಪ್ರಮುಖ ಬೆಳೆಗಳು ಹಾನಿಗೀಡಾಗಿವೆ. ಇದರಿಂದಾಗಿ ರೈತರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. “ಅತೀವೃಷ್ಟಿಯಿಂದ ರೈತರ ಪಾಲಿಗೆ ಭಾರೀ ನಷ್ಟ ಉಂಟಾಗಿದೆ.
ಇದಕ್ಕೆ ಪಸಲ್ ಬೀಮಾ ಯೋಜನೆಯಲ್ಲಿನ ಲೋಪದೋಷಗಳು ಪ್ರಮುಖ ಕಾರಣವಾಗಿದ್ದು, ಜಿಲ್ಲೆಯ ರೈತರು ಸರಿಯಾದ ವಿಮಾ ಪರಿಹಾರದಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ರೈತರ ಸಂಕಷ್ಟವನ್ನು ಗುರುತಿಸಿ ತಕ್ಷಣ ಪ್ರತಿ ಎಕರೆಗೆ ₹25,000 ಪರಿಹಾರ ಘೋಷಿಸಬೇಕು” ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.