ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಸುಮಾರು 10ರಿಂದ 15 ಜನರಿಗೆ ಗಂಭೀರ ಗಾಯಗಳಾಗಿವೆ.
ಘಟನೆಯ ತೀವ್ರತೆಯಿಂದ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಗೊಂಡವರನ್ನು ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಪಘಾತ ಸಂಭವಿಸಿದ ನಂತರ ಕೆಲ ಹೊತ್ತು ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.