ರವಿವಾರ ಪೇಟದಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಜಾಗೃತಿ
ತಂಬಾಕು ಮುಕ್ತ ಯುವ ಅಭಿಯಾನ 3.0.
ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ
ರವಿವಾರ ಪೇಟದಲ್ಲಿ ಅಂಗಡಿ ಮಾಲೀಕರಿಗೆ ಜಾಗೃತಿ
ಕೋಟ್ಪಾ ಕಾಯ್ದೆಯಡಿ 22 ಪ್ರಕರಣ ದಾಖಲು
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (NTCP) ಭಾಗವಾದ ‘ತಂಬಾಕು ಮುಕ್ತ ಯುವ ಅಭಿಯಾನ 3.0’ ಅಡಿಯಲ್ಲಿ ಬೆಳಗಾವಿಯಲ್ಲಿ ತಂಬಾಕು ನಿಯಂತ್ರಣಕ್ಕಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಿತು.
ಮಾರ್ಕೆಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ರವಿವಾರ ಪೇಟದಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ
ಮೂಡಿಸಲಾಯಿತು.ಈ ಸಂದರ್ಭದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆಯನ್ನು ನಿಯಂತ್ರಿಸುವ COTPA (ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯಿದೆ) ಅಡಿಯಲ್ಲಿ 22 ಪ್ರಕರಣಗಳನ್ನು ದಾಖಲಿಸಲಾಯಿತು. ಬೆಂಗಳೂರಿನ ರಾಜ್ಯ ತಂಬಾಕು ನಿಯಂತ್ರಣ ಘಟಕದ ಮಹಾಂತೇಶ್ ಉಳ್ಳಾಗಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಡಾ. ಶ್ವೇತಾ ಪಾಟೀಲ್, ಸಮಾಜ ಕಾರ್ಯಕರ್ತರಾದ ಕು. ಕವಿತಾ ರಾಜಣ್ಣವರ ಹಾಗೂ ಪೊಲೀಸ್ ಸಿಬ್ಬಂದಿಯವರು ಉಪಸ್ಥಿತರಿದ್ದರು.
Laxmi News 24×7