Breaking News

ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ

Spread the love

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಈಗಾಗಲೇ ಹಲವೆಡೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಏ. 29, 30 ರಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೋಲಾರ, ಮೈಸೂರು, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಹಲವೆಡೆ ಮುಂದಿನ 72 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ