Breaking News

ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ? ಸಾವಿರಾರು ಮಹಿಳೆಯರ ಆರೋಪ..!!

Spread the love

ಹಾವೇರಿ: ಬೆಳಗಾವಿಯ ಶಿವಂ ಅಸೋಶಿಯೇಟ್ಸ್ ಹಗರಣದ ಮಾದರಿಯಲ್ಲೇ ಹಾವೇರಿಯಲ್ಲೂ ಭಾರೀ ವಂಚನೆ ನಡೆದಿರುವ ಆರೋಪ ಕೇಳಿಬಂದಿದೆ. ಸ್ವಯಂ ಉದ್ಯೋಗ ಹಾಗೂ ಮನೆಯಲ್ಲೇ ಕೆಲಸ ಮಾಡಿ ಆದಾಯ ಗಳಿಸುವ ಭರವಸೆ ನೀಡಿ ಸಾವಿರಾರು ಮಹಿಳೆಯರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ಕಂಪನಿ ಮಾಲೀಕರು ನಾಪತ್ತೆಯಾಗಿದ್ದಾರೆ ಎಂದು ನೊಂದವರು ಆರೋಪಿಸಿದ್ದಾರೆ.

ಹಾವೇರಿ ನಗರದ ಅಶ್ವಿನಿ ನಗರದಲ್ಲಿರುವ ಎಸ್‌ಎಲ್‌ವಿ ಮಹಿಳಾ ಮಾರ್ಟ್ ಆ್ಯಂಡ್ ಮಾರ್ಕೆಟಿಂಗ್ ಸಂಸ್ಥೆಯ ವಿರುದ್ಧ ಈ ಆರೋಪ ಕೇಳಿಬಂದಿದೆ. ಕಂಪನಿಯ ಪ್ರಮುಖರಾದ ವಿನಾಯಕ ಆನ್ವೇರಿ ಹಾಗೂ ರಮ್ಯಾ ಅವರು ಮಹಿಳೆಯರಿಗೆ ವರ್ಕ್ ಫ್ರಮ್ ಹೋಮ್ ಉದ್ಯೋಗ ನೀಡುವುದಾಗಿ ನಂಬಿಸಿದ್ದರು ಎನ್ನಲಾಗಿದೆ.

ಊದಬತ್ತಿ, ಮೇಣದ ಬತ್ತಿ, ಕರ್ಪೂರ, ಧೂಪ ಸೇರಿದಂತೆ ವಿವಿಧ ಉತ್ಪನ್ನಗಳನ್ನು ನೀಡುತ್ತೇವೆ. ಅವುಗಳನ್ನು ಮನೆಯಲ್ಲೇ ಪ್ಯಾಕಿಂಗ್ ಮಾಡಿ ನೀಡಿದರೆ ಆದಾಯ ಸಿಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಅಲ್ಲದೆ ರಾಜ್ಯಾದ್ಯಂತ ಸಂಸ್ಥೆಯ 9 ಶಾಖೆಗಳಿವೆ ಎಂದು ಹೇಳಿ ಜನರ ವಿಶ್ವಾಸ ಗಳಿಸಿದ್ದರು ಎಂದು ನೊಂದವರು ತಿಳಿಸಿದ್ದಾರೆ.

ಕನಿಷ್ಠ 25 ಸಾವಿರ ರೂಪಾಯಿಯಿಂದ 5 ಲಕ್ಷ ರೂಪಾಯಿವರೆಗೆ ಡೆಪಾಸಿಟ್ ಹೂಡಿಕೆ ಮಾಡಬೇಕು. ಒಂದು ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು 26 ಸಾವಿರ ರೂಪಾಯಿ ಆದಾಯ ನೀಡುವುದಾಗಿ ಆಮಿಷ ಒಡ್ಡಲಾಗಿತ್ತು ಎನ್ನಲಾಗಿದೆ. ಈ ನಂಬಿಕೆಯಿಂದ ಸಾವಿರಾರು ಮಹಿಳೆಯರು ಹಣ ಹೂಡಿಕೆ ಮಾಡಿದ್ದರು.

ಆದರೆ ಇದೀಗ ಸಂಸ್ಥೆಯವರು ಸುಮಾರು 10 ಕೋಟಿ ರೂಪಾಯಿ ಹಣ ಪಡೆದು ಪರಾರಿಯಾಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಈ ಸಂಬಂಧ ಹಾವೇರಿ ಶಹರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಸಾವಿರಾರು ನೊಂದ ಮಹಿಳೆಯರು ಠಾಣೆ ಮುಂದೆ ಜಮಾಯಿಸಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ವಂಚನೆ ನಡೆಸಿರುವ ಆರೋಪ ಎದುರಿಸುತ್ತಿರುವ ವಿನಾಯಕ ಆನ್ವೇರಿ ಸೇರಿದಂತೆ ಸಂಬಂಧಪಟ್ಟವರನ್ನು ಕೂಡಲೇ ಬಂಧಿಸಿ, ನೊಂದವರಿಗೆ ಹಣ ವಾಪಸ್ ಕೊಡಿಸಬೇಕು ಎಂದು ಮಹಿಳೆಯರು ಆಗ್ರಹಿಸಿದ್ದಾರೆ.

ಪ್ರಕರಣ ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಛತ್ತೀಸ್‌ಗಢ ಸಚಿವ ಗಜೇಂದ್ರ ಯಾದವ್ ಐತಿಹಾಸಿಕ ಲಕ್ಕುಂಡಿ ಕ್ಷೇತ್ರಕ್ಕೆ ಭೇಟಿ: ಪರಂಪರೆಗೆ ಶ್ಲಾಘನೆ

Spread the loveಗದಗ: ಛತ್ತೀಸ್‌ಗಢ ರಾಜ್ಯದ ಶಾಲಾ ಶಿಕ್ಷಣ, ಗ್ರಾಮೋದ್ಯಮ, ಕಾನೂನು ಹಾಗೂ ಶಾಸನ ವ್ಯವಹಾರಗಳ ಸಚಿವರಾದ ಗಜೇಂದ್ರ ಯಾದವ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ