ನವದೆಹಲಿ : ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು , ಇಂದು ಮತ್ತೆ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆಯಾಗಿದೆ .
ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 27 ಪೈಸೆ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 29 ಪೈಸೆ ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಈಗ ಲೀಟರ್ ಗೆ 92.85 ರೂ. ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 83.51 ರೂ.ಗೆ ಏರಿಕೆಯಾಗಿದೆ.
ಮುಂಬೈ ನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 99.14 ರೂ. ಇದ್ದರೆ ಡೀಸೆಲ್ ದರ ಪ್ರತಿ ಲೀಟರ್ ಗೆ 90.71 ಗೆ ಏರಿಕೆಯಾಗಿದೆ. ಚೆನ್ನೈ ನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 94.54 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ ದರ 88.34 ತಲುಪಿದೆ.