ಚಾಮರಾಜನಗರ: ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 30 ಪೈಸೆ ಏರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಮುಖಂಡರು ಒಂಟಿ ಕಾಲಿನಲ್ಲಿ ನಿಂತು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಚಾ.ಗು.ನಾಗರಾಜು, ನಿಜಧ್ವನಿ ಗೋವಿಂದರಾಜು ಅವರು ನಗರದ ಸೆಸ್ಕಾಂ ಕಚೇರಿ ಮುಂದೆ ಒಂಟಿ ಕಾಲಿನಲ್ಲಿ ನಿಂತು ವಿದ್ಯುತ್ ದರ ಹೆಚ್ಚಳ ವಿರೋಧಿದರು.
ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೋವಿಡ್‌ನಿಂದ ಜನ ತತ್ತರಿಸಿ ತುಂಬಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಅರಿವಿದ್ದು ಇದ್ದೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ದರ ಹೆಚ್ಚಿಸಿದ್ದು, ಕೂಡಲೇ ರಾಜ್ಯ ಸರ್ಕಾರ ದರ ಏರಿಕೆಯನ್ನು ಕೈ ಬಿಟ್ಟು ಗ್ರಾಹಕರ ಹಿತ ಕಾಯಬೇಕೆಂದು ಒತ್ತಾಯಿಸಿದರು.