Breaking News

ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ

Spread the love

ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ*
* *ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವರು*
*ಬೆಂಗಳೂರು* : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಈ ಸಂಬಂಧ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದರು.
ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದೆ.‌ ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿ ಈ ಸಮಸ್ಯೆಯನ್ನು ಬಗೆ ಹರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷಗಳಾಗಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಸಮಿತಿ ಅಧ್ಯಕ್ಷರಾದ ಜಿ.ಆರ್.ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ನಾಗರತ್ನಮ್ಮ, ಎಐಯುಟಿಯುಸಿ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಎಐಟಿಯುಸಿ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಪ್ರಧಾನ ಕಾರ್ಯದರ್ಶಿ ಎಂ.ಉಮಾದೇವಿ ಸೇರಿದಂತೆ ಸಂಘಟನೆಯ ನೂರಾರು ‌ಮಂದಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

Spread the loveಕೊಪ್ಪಳ, ನವೆಂಬರ್​ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ