ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಕೇಂದ್ರದ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವರಾದ ಶ್ರೀ Piyush Goyal ಅವರೊಂದಿಗೆ ಪಾಲ್ಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಹತ್ವಪೂರ್ಣ ಸಂವಾದ ನಡೆಸಲಾಯಿತು. ಶ್ರೀ ಗೋಯಲ್ ಅವರು ಬೆಳೆಗಾರರ ಸಂಕಷ್ಟ ನಿವಾರಣೆ ನಿಟ್ಟಿನಲ್ಲಿ ಸ್ಪಷ್ಟ ಭರವಸೆ ನೀಡಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ.
ಮಾಜಿ ಸಚಿವರಾದ ಶ್ರೀ ಹೆಚ್.ಕೆ.ಕುಮಾರಸ್ವಾಮಿ, ಶ್ರೀಮತಿ ಮೋಟಮ್ಮ, ಕರ್ನಾಟಕ ಗ್ರೋವರ್ಸ್ ಫೆಡರೇಶನ್ ಅಧ್ಯಕ್ಷ ಡಾ.ಹೆಚ್.ಟಿ. ಮೋಹನ್ ಕುಮಾರ್, ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ಶ್ರೀ ಶ್ರೇಯಸ್ ಪಟೇಲ್, ಶಾಸಕರಾದ ಶ್ರೀ ಎಸ್.ಮಂಜುನಾಥ್, ಶ್ರೀ ಹೆಚ್.ಕೆ. ಸುರೇಶ್, ಶ್ರೀ ಮಂಥರ್ ಗೌಡ, ಶ್ರೀ ಸ್ವರೂಪ್ ಪ್ರಕಾಶ್, ಕಾಫಿ ಮಂಡಳಿ ಅಧ್ಯಕ್ಷ ಶ್ರೀ ಡಿ.ಜೆ.ದಿನೇಶ್ ಸೇರಿದಂತೆ ಅನೇಕ ಗಣ್ಯರು, ಕಾಫಿ ಬೆಳೆಗಾರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.