ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಹತ್ವದ ಜವಾಬ್ದಾರಿಯನ್ನು ಎಐಸಿಸಿ ನೀಡಿದೆ.
ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆದೇಶವನ್ನು ಹೊರಡಿಸಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಪಕ್ಷ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದೆ.
ಸಚಿವ ದಿನೇಶ್ ಗುಂಡೂರಾವ್ ಅವರನ್ನು ಪುದುಚೇರಿ ವಿಧಾನಸಭೆ ಚುನಾವಣೆ 2026ಕ್ಕೆ ಎಐಸಿಸಿ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಮಾರ್ಚ್ 10ರ ಬಳಿಕ ಕೇಂದ್ರ ಚುನಾವಣಾ ಆಯೋಗ ಪುದುಚೇರಿ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಿದೆ.
ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭೆಯ ಅವಧಿ ಜೂನ್ 15ಕ್ಕೆ ಅಂತ್ಯಗೊಳ್ಳಲಿದೆ. ಈಗ 4 ರಾಜ್ಯಗಳ ವಿಧಾನಸಭೆ ಚುನಾವಣೆ ಜೊತೆಗೆ ಪುದುಚೇರಿಯಲ್ಲಿಯೂ ಚುನಾವಣೆ ನಡೆಸಲು ಚುನಾವಣಾ ಆಯೋಗ ತಯಾರಿ ನಡೆಸಿದೆ.
ಪುದುಚೇರಿ 30 ಸದಸ್ಯ ಬಲದ ವಿಧಾನಸಭೆಯನ್ನು ಹೊಂದಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 16.
2021ರ ಚುನಾವಣೆಯಲ್ಲಿ ಎಐಎನ್‌ಆರ್‌ಸಿ 10, ಡಿಎಂಕೆ 6, ಕಾಂಗ್ರೆಸ್ 2, ಇತರರು 12 ಸೀಟುಗಳಲ್ಲಿ ಜಯಗಳಿಸಿದ್ದರು. ಚುನಾವಣೆ ಬಳಿಕ ಎನ್‌ಡಿಎ ಸರ್ಕಾರ ರಚನೆಗೊಂಡಿತು. ರಂಗಸಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎಐಎನ್‌ಆರ್‌ಸಿ ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ.
Laxmi News 24×7