Breaking News

ಸಿಎಂ ‌ಪದಕ‌ ಪಡೆದ ಪಿಎಸ್ಐ ಲೋಕಾಯುಕ್ತ ಬಲೆಗೆ

Spread the love

ಬೆಳಗಾವಿ : ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿನ್ನದ ಪದಕ ಪಡೆದಿದ್ದ ಪಿಎಸ್ಐ ಹಾಗೂ ಅದೇ ಪೊಲೀಸ್ ಠಾಣೆಯ ಸಿಬ್ಬಂದಿ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ತಡ ರಾತ್ರಿ ನಡೆದಿದೆ.

ಕಲಬುರಗಿ ಜಿಲ್ಲೆಯ ಯಡ್ರಾಮಿ ಪೊಲೀಸ್‌ ಠಾಣೆ ಪಿಎಸ್ಐ ವಿಶ್ವನಾಥ ಮುದರೆಡ್ಡಿ ಹಾಗೂ ಸುಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಅರುಣ್ ಮರಗುಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ಸಹಕಾರ ನೀಡುವುದಾಗಿ ಆನಂದ್ ಕುಸ್ತಿ ಎಂಬುವವರಿಗೆ ಹಣದ ಬೇಡಿಕೆ ಇಡಲಾಗಿತ್ತು. ಇದೆ ತಿಂಗಳ 12ನೇ ತಾರೀಖಿನಂದು, ಫೋನ್ ಪೇ ಮೂಲಕ ಇಪ್ಪತ್ತು ಸಾವಿರ ರೂಪಾಯಿಗಳನ್ನು ಪಡೆಯಲಾಗಿತ್ತು. ಮತ್ತೆ ಮೂವತ್ತು ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದು.

ಅದರಲ್ಲಿ 20 ಸಾವಿರ ರೂಪಾಯಿಗಳನ್ನು ಯಡ್ರಾಮಿ ಪೊಲೀಸ್ ಠಾಣೆಯ ಆವರಣದಲ್ಲಿ ಪಡೆಯುವಾಗ ಲೋಕಾಯುಕ್ತರು ದಾಳಿ ಮಾಡಿ ಇಬ್ಬರನ್ನೂ ಬಂಧಿಸಲಾಗಿದೆ.
ಗಂಭೀರ ಪ್ರಕರಣಗಳಲ್ಲಿ ಹಾಗೂ ಆರೋಪಿಗಳ ಬಂಧನದಲ್ಲಿ ತೋರಿದ ಕಾರ್ಯಕ್ಷಮತೆಗಾಗಿ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಅವರು 2024-25ನೇ ಸಾಲಿನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಿನ್ನದ ಪದಕವನ್ನು ಪಡೆದಿದ್ದರು.

ಬಂಧಿತ ಆರೋಪಿಗಳನ್ನು ಕಲಬುರಗಿ ನಗರದ ಐವಾನ್ ಶಾಹಿ ಅತಿಥಿಗೃಹದ ಆವರಣದಲ್ಲಿರುವ ಲೋಕಾಯುಕ್ತರ ಕಚೇರಿಗೆ ಕರೆತಂದು ಹೆಚ್ಚಿನ ವಿಚಾರಣೆಗೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ