Breaking News

ಸೆ.20ಕ್ಕೆ ಸಿಇಟಿ ಫ‌ಲಿತಾಂಶ ಸಾಧ್ಯತೆ?

Spread the love

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫ‌ಲಿತಾಂಶ ಸೆ.20ರಂದು ಹೊರಬೀಳುವ ಸಾಧ್ಯತೆಯಿದೆ.

ಎಂಜಿನಿಯರಿಂಗ್‌ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವೂ ನಡೆಯುತ್ತಿದೆ. ಸೆ.20ರಂದು ಫ‌ಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯದೇ ಇರುವುದರಿಂದ ಈ ಬದಲಾವಣೆ ಮಾಡಿಕೊಳ್ಳಲಾಗಿದೆ. ಸಿಇಟಿ ಫ‌ಲಿತಾಂಶದ ನಂತರ ದಾಖಲಾತಿ ಪರಿಶೀಲನೆ ಹಾಗೂ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ.

ಬಹುಆಯ್ಕೆ ಪ್ರಶ್ನೆಗಳ ಮೂಲಕ ಪರೀಕ್ಷೆ ನಡೆದಿರುವುದರಿಂದ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದಿಲ್ಲ. ಹೀಗಾಗಿ ಸೆ.15ರೊಳಗೆ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣವಾಗಲಿದೆ. ನಂತರ ಫ‌ಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರು ಪ್ರಕಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ವಿವರಿಸಿದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ