Breaking News

ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟಿ

Spread the love

ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟಿ ರಾಷ್ಟ್ರದ ಗೌರವವನ್ನು ರಕ್ಷಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮಿತಿಯ ಪದಾಧಿಕಾರಿಗಳು ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಆಗುವ ಘಟನೆಗಳು ನಡೆಯುತ್ತವೆ.

ಹೀಗಾಗಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ರೀತಿ ರಾಷ್ಟ್ರ ಧ್ವಜಕ್ಕೆ ಅಪಮಾನ ಆಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಪರವಾಗಿ ಶಿರಸ್ತೇದಾರ ಮನವಿ ಸ್ವೀಕರಿಸಿದರು.

ಈ ವೇಳೆ ಋಷಿಕೇಶ ಗುರ್ಜರ, ಸುಧೀರ ಹೇರೆಕರ, ಸವಿತಾ ಗಣೇಶ, ಅರ್ಚನಾ ಲಿಮಯೆ, ಮಾರುತಿ ಸುತಾರ, ಸದಾನಂದ ಮಾಸೇಕರ, ಗೋಪಿನಾಥ ಸೇರಿದಂತೆ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ