ಬೆಳಗಾವಿ: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಸದಾಶಿವನಗರದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜ ಕುರಿಹುಲಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಸವರಾಜ ಚೆನ್ನನ್ನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟುಂಬಸ್ಥರ ಸಮ್ಮುಖದಲ್ಲಿ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಈ ವೇಳೆ ಮೃತ ಯುವತಿ ತಂದೆ – ತಾಯಿ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಳಗ್ಗೆ ಉಪಹಾರ ಸೇವಿಸಿದ ವಿದ್ಯಾರ್ಥಿನಿ ಸಹಪಾಠಿಗಳಿಗೆ ನೀವು ಕಾಲೇಜಿಗೆ ಹೋಗಿ ಬನ್ನಿ ಎಂದು ಹೇಳಿದ್ದಾಳೆ. ಈ ವೇಳೆ ವಸತಿ ನಿಲಯದ ರೂಮ್ ಲಾಕ್ ಮಾಡಿಕೊಂಡು ಮಧ್ಯಾಹ್ನ 12.10-12.30 ಅವಧಿಯೊಳಗೆ ಆತ್ಮಹತ್ಯೆ ಹಾಕಿಕೊಂಡಿದ್ದಾಳೆ. ಡೆತ್ನೋಟ್ ಕೂಡ ಸಿಕ್ಕಿದ್ದು, ನನ್ನ ಸಾವಿಗೆ ಬೇರೆ ಯಾರೂ ಕಾರಣ ಅಲ್ಲ. ನಾನೇ ಕಾರಣ ಎಂದು ಡೆತ್ನೋಟ್ನಲ್ಲಿ ಮೃತ ವಿದ್ಯಾರ್ಥಿನಿ ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.