ಚಿಕ್ಕಮಗಳೂರು : ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ವಿಚಾರವೇ ಯುವಕನ ಕೊಲೆಗೆ ಕಾರಣವಾಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಮೂಲದ ಮಂಜುನಾಥ್ (28) ಮೃತ ಯುವಕ.
ಈ ಕುರಿತು ಅಡಿಷನಲ್ ಎಸ್ಪಿ ಜಯಕುಮಾರ್ ಅವರು ಮಾತನಾಡಿದ್ದು, ‘ಇಂದು ಬೆಳಗಿನ ಜಾವ ತರೀಕೆರೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಅದರಲ್ಲಿ ಕೋಟೆ ಮಂಜುನಾಥ್ ಎಂಬ ವ್ಯಕ್ತಿಗೆ ಆತನ ನಾಲ್ವರು ಸ್ನೇಹಿತರು ಅಡ್ಡಗಟ್ಟಿ ಚಾಕುವಿನಿಂದ ಇರಿದಿದ್ದಾರೆ ಎಂದು ವರದಿಯಾಗಿದೆ. ನಂತರ ಆ ವ್ಯಕ್ತಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂಬುದು ತಿಳಿದು ಹೋಗಿ ಪರಿಶೀಲನೆ ಮಾಡಿದಾಗ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಆ ವ್ಯಕ್ತಿಯ ಜೊತೆಗಿದ್ದ ಕೋಟೇಶ್ ಎಂಬ ವ್ಯಕ್ತಿಯಿಂದ ದೂರನ್ನು ಪಡೆದುಕೊಂಡಿದ್ದೇವೆ. ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದೇವೆ’ ಎಂದು ತಿಳಿಸಿದ್ದಾರೆ.
Laxmi News 24×7