ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕೊನೆಗೂ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಅನುಮತಿ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಎರಡು ದಿನ ಕಾಲ ನಿರಂತರ ಹೋರಾಟ ನಡೆಸಿತ್ತು. ಕೊನೆಗೂ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಷರತ್ತುಬದ್ಧ ಅನುಮತಿ ನೀಡಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಲವು ಷರತ್ತುಗಳನ್ನು ಹಾಕಿ ಅನುಮತಿ ನೀಡಲಾಗಿದೆ. ಆ ಪ್ರಮಖ ಷರತ್ತುಗಳು ಇಂತಿವೆ:
ಅನುಮತಿ ಕುರಿತು ಅರವಿಂದ ಬೆಲ್ಲದ ಹಾಗೂ ಮಹೇಶ ಟೆಂಗಿನಕಾಯಿ ಪ್ರತಿಕ್ರಿಯೆ
- ಕಡ್ಡಾಯವಾಗಿ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆಯಬೇಕು.
- ಸೆ.19 ರಂದು ಬೆಳಗ್ಗೆ 6 ಗಂಟೆಯಿಂದ 21 ರಂದು ಮಧ್ಯಾಹ್ನ 12 ಗಂಟೆಯವರೆಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ.
- 30×30 ಅಳತೆಯ ಪೆಂಡಾಲ್ಗೆ ಮಾತ್ರ ಅವಕಾಶ.
- ಗಣೇಶ ಉತ್ಸವದ ಹೊರತಾಗಿ ಯಾವುದೇ ಬಾವುಟ, ಬಿತ್ತಪತ್ರ, ವಿವಾದಿತ ಫೋಟೋ ಪ್ರದರ್ಶನ ನಿಷೇಧ.
- ಮನರಂಜನಾ ಕಾರ್ಯಕ್ರಮಗಳಿಗೂ ನಿಷೇಧ.
- ಅನವಶ್ಯಕ ಗಲಭೆ, ಗಲಾಟೆಗಳಿಗೆ ಆಯೋಜಕರೆ ಹೊಣೆ.
- ಅನ್ಯಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವಂತಿಲ್ಲ.
- ಪ್ರಚೋದನಕಾರಿ ಹೇಳಿಕೆ, ಭಾಷಣ ನಿಷೇಧ ಸೇರಿದಂತೆ 18 ಷರತ್ತುಗಳನ್ನು ಮಹಾನಗರ ಪಾಲಿಕೆ ವಿಧಿಸಿದೆ.
ಪಾಲಿಕೆ ನಿರ್ಧಾರಕ್ಕೆ ಅರವಿಂದ ಬೆಲ್ಲದ ಹಾಗೂ ಮಹೇಶ ಟೆಂಗಿನಕಾಯಿ ಸ್ವಾಗತ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ಬೆನ್ನಲೇ ಪಾಲಿಕೆ ಕ್ರಮವನ್ನು ಶಾಸಕರಾದ ಮಹೇಶ ಟೆಂಗಿನಕಾಯಿ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಹಿಂಬಾಗಿಲಿನಿಂದ ಅಂಜುಮನ್ ಸಂಸ್ಥೆ ಮೂಲಕ ಕೋರ್ಟ್ ರೀಟ್ ಅರ್ಜಿ ಸಲ್ಲಿಸಿದೆ. ಕೊನೆ ಕ್ಷಣದಲ್ಲಿಯಾದರು ಸರ್ಕಾರ ಎಚ್ಚೆತ್ತುಕೊಂಡು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದೆ. ಮುಂದೆ ಕೂಡ ಹಿಂದೂ ಹಬ್ಬಗಳ ಆಚರಣೆಗೆ ಅಡೆತಡೆಗಳನ್ನು ಒಡ್ಡಬಾರದು. ನ್ಯಾಯಾಲಯ ಅತ್ಯುತ್ತಮ ತೀರ್ಪು ಕೊಟ್ಟಿದೆ, ನಮಗೆ ದೊಡ್ಡ ಜಯ ಸಿಕ್ಕಿದೆ.