Breaking News

ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ – ಡಿಕೆಶಿ ಘೋಷಣೆ

Spread the love

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ  ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಾವೇರಿ ನೀರಾವರಿ ನಿಗಮದ ಮೂಲಕ ಈ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾಡಿದ್ದ ಮನವಿಗೆ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅನುದಾನ ಬಿಡುಗಡೆಗೆ ಸೂಚನೆ ನೀಡಿದ್ದಾರೆ.

ಕಾವೇರಿ ತೀರ್ಥೋದ್ಭವವು ಕೊಡಗಿನ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಲ್ಲಿ ಒಂದಾಗಿದ್ದು, ಪ್ರತಿ ವರ್ಷ ಸಾವಿರಾರು ಭಕ್ತರು ಭಾಗವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಆಚರಣೆಯ ಸಿದ್ಧತೆಗಳು ಹಾಗೂ ಅಗತ್ಯ ಮೂಲಸೌಕರ್ಯಗಳಿಗಾಗಿ ಸರ್ಕಾರದಿಂದ 2 ಕೋಟಿ ರೂ. ಅನುದಾನ ನೀಡಲಾಗುತ್ತಿದೆ.

ಗೋಣಿಕೊಪ್ಪ ದಸರಾಗೂ ಹೆಚ್ಚುವರಿ ಅನುದಾನ:
ಇದೇ ವೇಳೆ ಗೋಣಿಕೊಪ್ಪ ದಸರಾ ಉತ್ಸವಕ್ಕೂ ಸರ್ಕಾರ ಹೆಚ್ಚುವರಿ ಅನುದಾನ ಘೋಷಿಸಿದೆ. ಕಳೆದ ಬಾರಿ ಗೋಣಿಕೊಪ್ಪ ದಸರಾ ಉತ್ಸವಕ್ಕೆ 75 ಲಕ್ಷ ರೂ. ಅನುದಾನ ನೀಡಲಾಗಿತ್ತು. ಈ ಬಾರಿ ಹೆಚ್ಚುವರಿಯಾಗಿ 25 ಲಕ್ಷ ರೂ. ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ.

ಹೀಗಾಗಿ ಕಾವೇರಿ ತೀರ್ಥೋದ್ಭವ ಹಾಗೂ ಗೋಣಿಕೊಪ್ಪ ದಸರಾ ಉತ್ಸವ ಎರಡಕ್ಕೂ ಸರ್ಕಾರದ ವತಿಯಿಂದ ಆರ್ಥಿಕ ನೆರವು ದೊರೆಯಲಿದೆ.


Spread the love

About Laxminews 24x7

Check Also

ಇನ್‌ಸ್ಟಾ ಪ್ರೇಯಸಿಗೆ ಎಂಗೇಜ್‌ಮೆಂಟ್; ಆರನೇ ಮಹಡಿಯಿಂದ ಜಿಗಿಯಲು ಮುಂದಾದ ಅಪ್ರಾಪ್ತ

Spread the loveಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಯುವತಿಗೆ  ಎಂಗೇಜ್‌ಮೆಂಟ್ ಆಗಿದೆ ಎಂಬ ವಿಚಾರ ತಿಳಿದು ಅಪ್ರಾಪ್ತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ