Breaking News

ಮಲೆ ಮಹದೇಶ್ವರ ಬೆಟ್ಟದಲ್ಲಿ 108 ಕುಂಭಾಭಿಷೇಕ

Spread the love

ಚಾಮರಾಜನಗರ: ಶ್ರಾವಣ ಮಾಸದ ಅಮಾವಾಸ್ಯೆ ಅಂಗವಾಗಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ 108 ಕುಂಭಾಭಿಷೇಕ ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು.

ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಸ್ವಾಮಿಗೆ ಅಭಿಷೇಕ ಹಾಗೂ ವಿಶೇಷ ಅಲಂಕಾರ ಮಾಡಲಾಯಿತು.

108 ಕುಂಭಗಳಲ್ಲಿ ಪವಿತ್ರ ಜಲವನ್ನು ಸಂಗ್ರಹಿಸಿ ವಿಶೇಷ ಪೂಜಾ ವಿಧಿವಿಧಾನಗಳೊಂದಿಗೆ ಕುಂಭಾಭಿಷೇಕ ನೆರವೇರಿಸಲಾಯಿತು. ಬಳಿಕ ಸ್ವಾಮಿಗೆ ಮಹಾಮಂಗಳಾರತಿ ಸಲ್ಲಿಸಲಾಯಿತು.

ಬೆಟ್ಟದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಶ್ರದ್ಧಾ-ಭಕ್ತಿಯಿಂದ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಪುನೀತರಾದರು.


Spread the love

About Laxminews 24x7

Check Also

ಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆ

Spread the loveಮಂಗಳೂರು: ಬಂಟ್ವಾಳದ  ನರಿಕೊಂಬು  ಗ್ರಾಮದ ಶಾಲೆಯಲ್ಲಿ ಅಡುಗೆ ಮಾಡುವಾಗ ತೆಂಗಿನ ಕಾಯಿ ತುರಿಯುವ ವಿದ್ಯುತ್ ಯಂತ್ರಕ್ಕೆ ಸಿಲುಕಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ