Breaking News

ಕೋರ್ಟ್‌, ಏರ್‌ಪೋರ್ಟ್‌ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್‌

Spread the love

ಮೈಸೂರು: ದೇಶದ ನಾನಾ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಇಮೇಲ್ ರವಾನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು  ಮೈಸೂರಿನಲ್ಲಿ  ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿ‌ ಶ್ರೀನಿವಾಸ್ ಅಲಿಯಾಸ್ ಶ್ರೀನಿವಾಸ್ ಲೂಯಿಸ್ ಎಂದು ಗುರುತಿಸಲಾಗಿದೆ. ಈತ ದೇಶದ ನಾನಾ ಭಾಗಗಳಿಗೆ ಒಟ್ಟು 1,100ಕ್ಕೂ ಹೆಚ್ಚು ಬಾಂಬ್‌ ಬೆದರಿಕೆ  ಇಮೇಲ್ ಮಾಡಿ ವಿಧ್ವಂಸಕ ಕೃತ್ಯ ನಡೆಸುವ ಆತಂಕ ಸೃಷ್ಟಿಸಿದ್ದ. ನ್ಯಾಯಾಲಯಗಳು, ವಿವಿಧ ನಗರಗಳ ಪ್ರತಿಷ್ಠಿತ ಶಾಲೆ – ಕಾಲೇಜುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ರೈಲು ನಿಲ್ದಾಣ, ವಿಮಾನ ನಿಲ್ದಾಣಕ್ಕೂ  ಕೂಡ ಬಾಂಬ್ ಇಟ್ಟಿರುವ ಬಗ್ಗೆ ಕರೆ ಮಾಡುವುದು, ಇಮೇಲ್ ಮಾಡುವುದನ್ನು ಮಾಡಿದ್ದ.

ಆರೋಪಿ ಶ್ರೀನಿವಾಸ್‌ನನ್ನು ಹೆಚ್ಚಿನ ವಿಚಾರಣೆಗೆ ದೆಹಲಿ ಪೊಲೀಸರು ಕರೆದೊಯ್ಯಲಿದ್ದಾರೆ. ಆರೋಪಿಯ ಮನೆಯಲ್ಲಿ ಹಲವು ಸಿಮ್‌ಗಳು ಹಾಗೂ ಲ್ಯಾಪ್ ಟ್ಯಾಪ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ