Breaking News

ಬಾಗಲಕೋಟೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 12 ಮಕ್ಕಳು ಅಸ್ವಸ್ಥ

Spread the love

ಬಾಗಲಕೋಟೆ: ಮುಧೋಳ  ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ  ಸೇವಿಸಿದ ಬಳಿಕ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ವಸ್ಥಗೊಂಡ 12 ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ.

ಮಧ್ಯಾಹ್ನ ಬಿಸಿಯೂಟ ಸೇವಿಸಿದ ಕೆಲವೇ ಹೊತ್ತಿನಲ್ಲಿ ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಇದರಿಂದ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ