Breaking News

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ 15 ಎಕರೆ ಕಬ್ಬು ಬೆಂಕಿಗಾಹುತಿ

Spread the love

ಬೀದರ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 15 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಓತಗಿ ಗ್ರಾಮದಲ್ಲಿ ನಡೆದಿದೆ.

ಬರಗಾಲದ ನಡುವೆ ಕಷ್ಟಪಟ್ಟು ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಗ್ರಾಮದ ರೈತ ಗೋವಿಂದ ಬೀರಪ್ಪ ಅವರಿಗೆ ಸೇರಿದ ಕಬ್ಬಿನ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ವೇಗವಾಗಿ ಹರಡಿದ ಪರಿಣಾಮ ಕಬ್ಬಿನ ಬೆಳೆ ಧಗಧಗನೆ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವಷ್ಟರಲ್ಲಿ ಕಬ್ಬು ಸುಟ್ಟು ಭಸ್ಮವಾಗಿತ್ತು.

ಸ್ಥಳಕ್ಕೆ ಶಾಸಕ ಸಿದ್ದು ಪಾಟೀಲ್ ಭೇಟಿ
ಘಟನೆಯ ಮಾಹಿತಿ ತಿಳಿದ ಶಾಸಕ ಸಿದ್ದು ಪಾಟೀಲ್ ಅವರು ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ, ರೈತನಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜೆಸ್ಕಾಂ ಅಧಿಕಾರಿಗಳಿಗೂ ಕರೆ ಮಾಡಿದ ಶಾಸಕ ಸಿದ್ದು ಪಾಟೀಲ್ ಅವರು, ಜೋತುಬಿದ್ದಿರುವ ವಿದ್ಯುತ್ ತಂತಿಗಳನ್ನು ದುರಸ್ತಿ ಮಾಡುವಂತೆ ಸೂಚಿಸಿದರು. ಅಲ್ಲದೆ, ಬೆಂಕಿಯಿಂದ ಭಾಗಶಃ ಉಳಿದಿರುವ ಕಬ್ಬನ್ನು ಕಟಾವು ಮಾಡಿ ಸಾಗಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ ನೀಡಿದರು.


Spread the love

About Laxminews 24x7

Check Also

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

Spread the loveಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ  ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ