ಕೋಲಾರ: ಅನ್ಯಧರ್ಮದ ಯುವಕನೊಬ್ಬ ಕೊಟ್ಟ ಕಿರುಕುಳದಿಂದ ಬೇಸರಗೊಂಡು 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕೋಲಾರದ ಕೆಜಿಎಫ್ನ ದೊಡ್ಡಕಾರಿ ಗ್ರಾಮದಲ್ಲಿ ನಡೆದಿದೆ.
ಜೀವಿತಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. 22 ವರ್ಷದ ಶಫೀ ಎಂಬ ಯುವಕ ನಿತ್ಯವೂ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ.
ಯುವಕ ಬಾಲಕಿಯ ಪೋಷಕರಿಗೂ ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ ಎಂದು ಧಮ್ಕಿ ಹಾಕಿದ್ದ. ಇದರಿಂದ ಪೋಷಕರು ಬಾಲಕಿಗೆ ಬೈದಿದ್ದರು. ಇದರಿಂದ ಮನನೊಂದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಹಿಂದೂ ಸಂಘಟನೆಗಳ ಮುಖಂಡರು, ಆರೋಪಿ ಬಂಧನಕ್ಕೆ ಒತ್ತಾಯ ಮಾಡಿದ್ದಾರೆ.
ಸದ್ಯ ಪೋಷಕರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ.
Laxmi News 24×7