Breaking News

ಲವ್ವರ್‌ ಮದುವೆಯಾಗಲು 21 ವಯಸ್ಸಾಗುವವರೆಗೆ ಕಾಯುವಂತೆ ಹೇಳಿದ ತಂದೆಯನ್ನೇ ಗುಂಡಿಕ್ಕಿ ಕೊಂದ 18 ವರ್ಷದ ಪುತ್ರ

Spread the love

ಚಂಡೀಗಢ: ನಿನಗಿನ್ನೂ 18 ವರ್ಷ. ನಿನ್ನ ಲವ್ವರ್‌ನ ಮದುವೆ ಆಗೋಕೆ 21 ವಯಸ್ಸಾಗುವವರೆಗೆ ಕಾಯಿ ಎಂದು ಬುದ್ದಿಮಾತು ಹೇಳಿದ ತಂದೆಯನ್ನೇ ಮಗ ಹತ್ಯೆ ಮಾಡಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ.

ಚಂಡೀಗಢ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್‌ನನ್ನು ಅವರ ಹದಿಹರೆಯದ ಮಗನೇ ಮನೆಯೊಳಗೆ ಗುಂಡಿಕ್ಕಿ ಕೊಂದಿದ್ದಾನೆ. ತನ್ನ ಲವ್ವರ್‌ ಮದುವೆಯಾಗಲು 21 ವರ್ಷ ವಯಸ್ಸಾಗುವವರೆಗೆ ಕಾಯುವಂತೆ ಪುತ್ರನಿಗೆ ತಂದೆ ಬುದ್ದಿಮಾತು ಹೇಳಿದ್ದರು.

ಪೊಲೀಸ್ ಪ್ರಧಾನ ಕಚೇರಿಯ ಲೆಕ್ಕಪತ್ರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿತಿನ್ ಸಿಂಗ್, ತಮ್ಮ 18 ವರ್ಷದ ಮಗ ಅರ್ಮಾನ್ ಜೊತೆ ಮದುವೆ ವಿಚಾರಕ್ಕೆ ವಾಗ್ವಾದ ನಡೆದಿತ್ತು. ಅದಾದ ಮಾರನೇ ದಿನವೇ ತಂದೆಯನ್ನು ಪುತ್ರ ಕೊಲೆ ಮಾಡಿದ್ದಾರೆ. ಸೆಕ್ಟರ್ 22ರಲ್ಲಿರುವ ತಮ್ಮ ಸರ್ಕಾರಿ ನಿವಾಸದಲ್ಲಿ ತಲೆಗೆ ಗುಂಡೇಟು ಬಿದ್ದ ಸ್ಥಿತಿಯಲ್ಲಿ ಸಿಂಗ್‌ ಮೃತದೇಹ ಪತ್ತೆಯಾಗಿತ್ತು.


Spread the love

About Laxminews 24x7

Check Also

ಮಹಿಳಾ ಮೀಸಲಾತಿ ಸನ್ನಿಹಿತ – ತುಮಕೂರಿನಲ್ಲಿ ಪುತ್ರಿಯರನ್ನು ರಾಜಕೀಯ ಅಖಾಡಕ್ಕೆ ಅಣಿಗೊಳಿಸುತ್ತಿರುವ ನಾಯಕರು

Spread the loveತುಮಕೂರು: ಕೇಂದ್ರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ಮಸೂದೆ ಕಾನೂನಾಗುವ ಎಲ್ಲಾ ಲಕ್ಷಣ ಇದೆ ಎಂಬ ಸುಳಿವು ಸಿಕ್ಕಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ