Breaking News

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವು

Spread the love

ಕೊಹಿಮಾ: ಕಳ್ಳಭಟ್ಟಿ  ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ನಾಗಾಲ್ಯಾಂಡ್‌ನಲ್ಲಿ ನಡೆದಿದೆ.

ಘಟನೆ ಬೆನ್ನಲ್ಲೇ ಮದ್ಯದ ಮೂಲ ಮತ್ತು ಪೂರೈಕೆ ಜಾಲವನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಕಳ್ಳಭಟ್ಟಿ ಸೇವನೆಯ ಬಳಿಕ ಮೊಕೊಕ್ಚುಂಗ್  ಜಿಲ್ಲೆಯಲ್ಲಿ 8 ಮಂದಿ ಹಾಗೂ ಟುಯೆನ್‌ಸಾಂಗ್  ಜಿಲ್ಲೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಐ.ಬಂಗ್ಲಾಂಗ್ ಚಾಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಕಲಬೆರಕೆಯ ಮದ್ಯ ಎಲ್ಲಿಂದ ಪೂರೈಕೆಯಾಗುತ್ತಿತ್ತು ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವೆಸುಪ್ರಾ ಕೆಜೊ ಹೇಳಿದ್ದಾರೆ.

ಮೃತರ ಸಾವಿಗೆ ನಿಖರ ಕಾರಣ ತಿಳಿಯಲು ಮದ್ಯದ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಗುವಾಹಟಿಗೆ ಕಳುಹಿಸಲಾಗಿದೆ. ತನಿಖೆಯಲ್ಲಿ ಕೆಲವು ಸುಳಿವುಗಳು ಸಿಕ್ಕಿವೆ. ಆದರೆ ಈ ಹಂತದಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವುಗಳ ಬಳಿಕ ಪೊಲೀಸರು ಹಲವು ಕಡೆ ದಾಳಿ ನಡೆಸಿದ್ದಾರೆ. ಈ ವೇಳೆ 19 ಮಂದಿಯನ್ನು ಬಂಧಿಸಲಾಗಿದ್ದು, ಸುಮಾರು 3,000 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಗಾಲ್ಯಾಂಡ್‌ನಲ್ಲಿ 1990ರಿಂದಲೇ ಮದ್ಯ ನಿಷೇಧ ಕಾನೂನು ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ಪೂರೈಕೆಯಾಗುತ್ತಿರುವ ಮದ್ಯದ ವಿರುದ್ಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಗುರುತು ಇಲ್ಲದ, ಲೇಬಲ್ ಇಲ್ಲದ ಅಥವಾ ಅಕ್ರಮವಾಗಿ ಮಾರಾಟವಾಗುತ್ತಿರುವ ಮದ್ಯ ಸೇವಿಸದಂತೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಮದ್ಯ ಸೇವಿಸಿದ ಬಳಿಕ ತಲೆಸುತ್ತು, ದೃಷ್ಟಿ ಮಸುಕಾಗುವುದು, ಉಸಿರಾಟದ ತೊಂದರೆ ಅಥವಾ ಪ್ರಜ್ಞೆ ಕಳೆದುಕೊಳ್ಳುವಂತಹ ಲಕ್ಷಣಗಳು ಕಂಡುಬAದರೆ ತಕ್ಷಣ ವೈದ್ಯಕೀಯ ನೆರವು ಪಡೆಯುವಂತೆ ಪೊಲೀಸರು ಸೂಚಿಸಿದ್ದಾರೆ.


Spread the love

About Laxminews 24x7

Check Also

ಚುನಾವಣಾ ಆಯೋಗದಲ್ಲಿ ಯಾಕೆ ಭಿನ್ನಾಭಿಪ್ರಾಯ ಬಂದಿದೆ ಅಂತ ಆಯೋಗವೇ ಸ್ಪಷ್ಟಪಡಿಸಲಿ: ಹೆಚ್‌ಡಿಕೆ

Spread the loveಬೆಂಗಳೂರು: ಚುನಾವಣಾ ಆಯೋಗದಲ್ಲಿ ಯಾಕೆ ಭಿನ್ನಾಭಿಪ್ರಾಯ ಬಂದಿದೆ ಅಂತ ಆಯೋಗವೇ ಸ್ಪಷ್ಟಪಡಿಸಲಿ ಎಂದು ಕೇಂದ್ರ ಸಚಿವ ಹೆಚ್‌ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ