Breaking News

200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ: ಪಟ್ಟಕ್ಕೇರುತ್ತಿದ್ದಂತೆ ವಿಜಯ್ ಗ್ಯಾರಂಟಿ

Spread the love

ಚೆನ್ನೈ: 200 ಯೂನಿಟ್ ಉಚಿತ ವಿದ್ಯುತ್  ಹಾಗೂ ಮಹಿಳೆಯರಿಗೆ ವಿಶೇಷ ಕಾರ್ಯಪಡೆ ರಚಿಸುವುದಾಗಿ ತಮಿಳುನಾಡಿನ ನೂತನ ಸಿಎಂ ವಿಜಯ್ ಗ್ಯಾರಂಟಿ  ಘೋಷಣೆ ಮಾಡಿದ್ದಾರೆ.

ತಮಿಳುನಾಡು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಈ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಕಡತಕ್ಕೆ ವಿಜಯ್ ಸಹಿ ಹಾಕಿದ್ದಾರೆ. ಈ ಸಂದರ್ಭ ಮಹಿಳೆಯರ ರಕ್ಷಣೆಗಾಗಿ ವಿಶೇಷ ಪಡೆ ರಚಿಸುವುದಾಗಿ ಭರವಸೆ ನೀಡಿದ್ದಾರೆ.  

ಪ್ರಮಾಣವಚನ ಸ್ವೀಕಾರ ಬಳಿಕ ಮಾತನಾಡಿದ ವಿಜಯ್, ನಾನು ಯಾವುದೇ ರಾಜಮನೆತನದಿಂದ ಬಂದಿಲ್ಲ. ನಾನು ಕೂಡ ಕಷ್ಟವನ್ನು ಅನುಭವಿಸಿದ್ದೇನೆ. ಜನರೇ ನನ್ನನ್ನು ಆರಿಸಿದ್ದಾರೆ. ಸುಳ್ಳು ಭರವಸೆಗಳನ್ನು ನೀಡಿ ನಾನು ಮೋಸ ಮಾಡಲ್ಲ ಎಂದರು.

ತಮಿಳುನಾಡು ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡುತ್ತೇನೆ. ಜನರ ಒಂದು ಪೈಸೆಯನ್ನೂ ಮುಟ್ಟಲ್ಲ. ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲು ಸ್ವಲ್ಪ ಸಮಯ ನೀಡಿ ಎಂದು ಜನರಲ್ಲಿ ಮನವಿ ಮಾಡಿದರು.


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ