Breaking News

Daily Archives: ಜನವರಿ 23, 2020

ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ

ಮೂಡಲಗಿ : ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯ ಡಾ.ಬಿ. ಆರ್.ಅಂಬೇಡ್ಕರ ಸಮುದಾಯ ಭವನ ಗಂಗಾನಗರದಲ್ಲಿ ತಾತ್ಕಾಲಿಕವಾಗಿ ಕಛೇರಿ ಪ್ರಾರಂಭಿಸುವದಾಗಿ ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದರು. ಅವರು ಬುಧವಾರ ಪಟ್ಟಣನದಲ್ಲಿ ನೂತನ ತಾಲೂಕು ಪಂಚಾಯತ ಕಾರ್ಯಾಲಯವನ್ನು ಪ್ರಾರಂಭಿಸುವ ಸಲುವಾಗಿ ಭೇಟಿ ನೀಡಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಉಪಸ್ಥಿತಿಯಲ್ಲಿ ಇದೇ ಭಾನುವಾರ …

Read More »

ನಿಮ್ಮ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ದೊರಕಿಸಿಕೊಡುತ್ತೇನೆ ಎಂಬ ವೀರ ಸೇನಾನಿ ಸುಭಾಷ್‍ಚಂದ್ರ ಬೋಸ್ ಅವರ 124ನೆ ಜನ್ಮದಿನ

ನವದೆಹಲಿ, ಜ.23- ವೀರ ಸೇನಾನಿ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ 124ನೆ ಜನ್ಮದಿನವಿಂದು. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡರು, ಡಾ.ಮನಮೋಹನ್‍ಸಿಂಗ್, ಕಾಂಗ್ರೆಸ್ ಮುಖಂಡರಾದ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಗುಲಾಮ್‍ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್‍ಸಿಂಗ್, ಪಶ್ಚಿಮ ಬಂಗಾಳ …

Read More »

ಸರ್ಕಾರಿ ಆಸ್ಪತ್ರೆಗಳ ಸೌಲಭ್ಯಗಳನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು: ಡಿಸಿಎಂ ಅಶ್ವತ್ಥ ನಾರಾಯಣ್

  ಮೈಸೂರು, ಜ.23- ಸಾರ್ವಜನಿಕರು ಹೆಚ್ಚು ಹೆಚ್ಚಾಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಕಾತೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು. ನಗರದ ವೈದ್ಯಕೀಯ ಮಹಿಳಾ ಯುಜಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯ ಆವರಣದಲ್ಲಿಂದು ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ …

Read More »

ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ. ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ ಎಂದಿದ್ದಾನೆ.

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಪೊಲೀಸರ ಮುಂದೆ ಶರಣಾಗಿದ್ದು, ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಇದರ ಬೆನ್ನಲ್ಲೇ ಆತನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದ್ದ ಬೆನ್ನಲ್ಲೇ ಅಂದು ಮಧ್ಯಾಹ್ನ 2.30ಕ್ಕೆ ಇಂಡಿಗೋ ವಿಮಾನ ಸಂಸ್ಥೆಯ ಮ್ಯಾನೇಜರ್​ಗೆ ಅನಾಮಧೇಯ ಕರೆಯೊಂದು ಬಂದಿತ್ತು. ಮಂಗಳೂರಿನಿಂದ ಹೈದರಾಬಾದ್​ಗೆ ತೆರಳುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿ ಬೆದರಿಕೆಯೊಡ್ಡಿದ್ದ. ವಿಷಯ …

Read More »

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್. ಕಾಗವಾಡ ಮತ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಇಲ್ಲಿಯವರೆಗೆ ಸುಮಾರು 110 ಕೋಟಿ ಅನುದಾನವನ್ನು ಕೊಟ್ಟಿದ್ದು ಅದರಿಂದ ಗ್ರಾಮೀಣ ಭಾಗದ ಕುಡಿಯುವ ನೀರು, ತೋಟದ ರಸ್ತೆ,ಕೆರೆಗಳ ಅಭಿವೃದ್ಧಿ, ಚರಂಡಿ, ಸ್ಮಶಾನ ದೇವಸ್ಥಾನ ಹೀಗೆ ಗ್ರಾಮೀಣ ಭಾಗಗಳನ್ನು ಸಮಸ್ಯೆಗಳು ನನ್ನ ಅವಧಿಯಲ್ಲಿ ಒಂದು ಕಾಣದಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದರು …

Read More »