Breaking News

Daily Archives: ಮಾರ್ಚ್ 28, 2020

ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ :ಸತೀಶ ಜಾರಕಿಹೊಳಿ

ಬೆಳಗಾವಿ: ಕೊರೋನಾ ವೈರಸ್ ಹರಡುವುದನ್ನು ‌ತಡೆಗಟ್ಟಲು ಇಡೀ‌‌‌ ಬೆಳಗಾವಿ‌‌ ನಗರವನ್ನು ಲಾಕ್ ಡೌನ್ ಮಾಡಲಾಗಿದ್ದು ಕೆಪಿಸಿಸಿ‌‌‌ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ತಮ್ಮ ವಾಹನದಲ್ಲಿ ನಗರ‌ ಪ್ರದಕ್ಷಿಣೆ ಹಾಕಿದ‌ ಯಮಕನಮರಡಿ ಶಾಸಕರೂ ಆದ ಸತೀಶ ಜಾರಕಿಹೊಳಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕೆಲವೊಂದು ಸೂಚನೆಗಳನ್ನು ನೀಡಿದರು. ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ ಮತ್ತು ತಾವು ಸುರಕ್ಷಿತವಾಗಿ ಇರಲು ತಿಳಿಸಿದರು. ನಗರದಲ್ಲಿ‌ ಸ್ವಚ್ಚತೆ ಕಾಪಾಡಿಕೊಂಡು ಮತ್ತು …

Read More »

ಇಂದಿನಿಂದ ಲಾಠಿ ಇಲ್ಲದ ಕರ್ತವ್ಯ ನಿರ್ವಹಿಸುವಂತೆ ಪೊಲೀಸರಿಗೆ ಕಮಿಷನರ್ ಸೂಚನೆ

ಬೆಂಗಳೂರು: ಕೊರೋನಾ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಏಪ್ರಿಲ್ 14ರವರೆಗೆ ದೇಶವನ್ನು ಲಾಕ್​ಡೌನ್​ ಮಾಡಲಾಗಿದೆ. ಮದ್ದಿಲ್ಲದ ಕೊರೋನಾ ಕಾಯಿಲೆಗೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾರಕ ಸೋಂಕನ್ನು ತಡೆಗಟ್ಟಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದರೆ, ಇಡೀ ದೇಶವನ್ನು ಲಾಕ್​ಡೌನ್​ ಮಾಡಿದ್ದರು ಜನರು ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದಾರೆ. ಇಂತಹವರಿಗೆ ಪೊಲೀಸರು ಕಂಡಕಂಡಲ್ಲಿ ಲಾಠಿ ರುಚಿ ತೋರಿಸುತ್ತಿದ್ದಾರೆ. ಕೆಲವರು ಬೇಕಾಬಿಟ್ಟಿಯಾಗಿ ರಸ್ತೆಯಲ್ಲಿ ಅಡ್ಡಾಡುತ್ತಾರೆ. ಆದರೆ, ಕೆಲವಷ್ಟು ಮಂದಿ ತುರ್ತು ಕೆಲಸ ಮೇಲೆ ಹೊರಗೆ …

Read More »

ವಿದೇಶದಿಂದ ಬಂದವರು ಸುತ್ತಾಡಿದ್ರೆ ಪಾಸ್‍ಪೋರ್ಟ್ ಮುಟ್ಟುಗೋಲು

ಉಡುಪಿ: ವಿದೇಶದಿಂದ ಬಂದು 28 ದಿನ ಗೃಹ ಬಂಧನದಲ್ಲಿ ಇರದೇ ಬೇಕಾಬಿಟ್ಟಿ ಸುತ್ತಾಡಿದ್ರೆ ನಿಮ್ಮ ಪಾಸ್‍ಪೋರ್ಟ್ ಮುಟ್ಟುಗೋಲು ಹಾಕುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಗೃಹ ಬಂಧನದಲ್ಲಿರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕೊರೊನಾ ಹರಡದಂತೆ ಕೇಂದ್ರ ಸರ್ಕಾರ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಿದೆ. ಆದರೆ ಆದೇಶ ಉಲ್ಲಂಘಿಸಿ ಶಂಕಿತರು ಸುತ್ತಾಡುವ ಮಾಹಿತಿ ಸಾರ್ವಜನಿಕರಿಂದ ಸಿಕ್ಕಿದೆ. ಒಂದೊಂದು ಮನೆಗೆ ಮೂರು ಬಾರಿ ಅಧಿಕಾರಿಗಳು, …

Read More »

ಗೌರಿಬಿದನೂರಿನಲ್ಲಿ ಮತ್ತೆ ಐವರಿಗೆ ಕೊರೊನಾ – ಇಬ್ಬರ ವರದಿಗೆ ಕಾಯುತ್ತಿರುವ ವೈದ್ಯರು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಸ್ಪಷ್ಟಪಡಿಸಿದ್ದಾರೆ. ಈ ಮೊದಲು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬರೂ ಸಾವನ್ನಪ್ಪಿದ್ದರು. ಮೆಕ್ಕಾ ಪ್ರವಾಸ ಕೈಗೊಂಡು ವಾಪಸ್ ಆಗಿದ್ದ ನಂತರ ಮೊದಲು ಕೊರೊನಾ ಪತ್ತೆಯಾಗಿದ್ದ 31 ವರ್ಷದ ವ್ಯಕ್ತಿಯ ತಾಯಿ ಹಾಗೂ ಚಿಕ್ಕಮ್ಮ ಸೇರಿ ಮೂವರಿಗೆ ಸೋಂಕು ಧೃಢವಾಗಿತ್ತು. ಈ ಮೂವರು ಸಹ ಮೆಕ್ಕಾ …

Read More »

ಕೆಆರ್ ಮಾರ್ಕೆಟ್ ಶಿಫ್ಟ್ ಪ್ಲಾನ್ ಠುಸ್- ಬಸವನಗುಡಿ ಮೈದಾನದಲ್ಲಿ ಸಾಮಾಜಿಕ ಅಂತರವೇ ಇಲ್

ಬೆಂಗಳೂರು: ಜನದಟ್ಟನೆ ಹಿನ್ನೆಲೆಯಲ್ಲಿ ಕೆಆರ್ ಮಾರ್ಕೆಟ್ ಅನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಶಿಫ್ಟ್ ಮಾಡಿದ್ದ ಪ್ಲಾನ್ ವಿಫಲವಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ ಕೆ.ಆರ್ ಮಾರುಕಟ್ಟೆಯಂತೆ ಆಗಿದೆ. ಬಸವನಗುಡಿ ಮೈದಾನದಲ್ಲಿ ಅನೇಕ ತರಕಾರಿ ಲೋಡ್ ಲಾರಿಗಳು ನಿಂತಿವೆ. ಅಷ್ಟೇ ಅಲ್ಲದೆ ಯಾವುದೇ ಸಾಮಾಜಿಕ ಅಂತರ ಇಲ್ಲದಂತಾಗಿದೆ. ಈ ಮೂಲಕ ಜನಸಂದಣಿ ಕಡಿಮೆ ಮಾಡುವ ಬಿಬಿಎಂಪಿ ಪ್ಲಾನ್ ಠುಸ್ ಆಗಿದೆ. 20 ಅಡಿ ಅಂತರದಲ್ಲಿ ಸ್ಟಾಲ್ ನಿರ್ಮಾಣ ಮಾಡಲಾಗುವುದು ಎಂದು …

Read More »