Breaking News

Daily Archives: ಮಾರ್ಚ್ 31, 2020

ರಾಜ್ಯದಲ್ಲಿ ಕೊರೊನಾಗೆ ಮೂವರು ಬಲಿ – ಮದ್ಯ ಸಿಗದಕ್ಕೆ 13 ಸಾವು

ಬೆಂಗಳೂರು: ಕುಡುಕರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರೋದು, ಕೊರೊನಾ ವೈರಸ್ ಲಾಕ್‍ಡೌನ್ ವೇಳೆ ಉದ್ಭವಿಸಿರುವ ಮತ್ತೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಲಾಕ್‍ಡೌನ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕುಡಿಯಲು ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿ ಕಳೆದ ಆರು ದಿನಗಳಲ್ಲಿ ರಾಜ್ಯದ ಹಲವೆಡೆ ಒಟ್ಟು 13 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮೂವರು …

Read More »

ಹೊಸಪೇಟೆಯ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು

ಬಳ್ಳಾರಿ: ಜಿಲ್ಲೆಯ ಹೊಸಪೇಟೆಯ ಎಸ್.ಆರ್ ನಗರದ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೊರೊನಾ ಗುಣಲಕ್ಷಣಗಳು ಕಂಡ ಬಂದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯಷ್ಟೇ ಮೂವರನ್ನು ಬಳ್ಳಾರಿಯ ವಿಮ್ಸ್ ಗೆ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಇಂದು ಮೂವರ ವರದಿ ಬಂದಿದ್ದು, ಮೂವರಲ್ಲೂ ಸೋಂಕು ಇರುವುದು ದೃಢವಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ. ಸೋಂಕಿತರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದು, ಈ ಮೂವರು ಇತ್ತೀಚೆಗೆ ಬೆಂಗಳೂರಿನಿಂದ ವಾಪಸ್ಸಾಗಿದ್ದರು. …

Read More »

ಡೇಂಜರ್ ಝೋನ್ ಆಗ್ತಿದೆಯಾ ರಾಷ್ಟ್ರ ರಾಜಧಾನಿ?

ನವದೆಹಲಿ: ಒಂದೇ ದಿನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಚಿತ್ರಣ ಬದಲಾಗುವ ಸಾಧ್ಯತೆ ಕಂಡು ಬಂದಿದೆ. ಒಂದೇ ದಿನದಲ್ಲಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟಾಗುವ ಸಾಧ್ಯತೆ ಇದೆ. ದೆಹಲಿಯ ನಿಜ್ಜಾಮುದ್ದಿನ್ ಮರ್ಕಸ್ ನಲ್ಲಿದ್ದ 163 ಮಂದಿಯನ್ನ ಲೋಕ ನಾಯಕ ಆಸ್ಪತ್ರೆಗೆ ರವಾನಿಸಿದ್ದು, ಐಸೋಲೇಷನ್ ನಲ್ಲಿ ಇಡಲಾಗಿದೆ. ಇವರ ಎಲ್ಲರ ಸ್ಯಾಂಪಲ್ ಗಳನ್ನು ಪಡೆದು ಲ್ಯಾಬ್‍ಗಳಿಗೆ ಕಳುಹಿಸಲಾಗಿದ್ದು ಇಂದು ಸಂಜೆ ವೇಳೆಗೆ ವರದಿ ಬರುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ ಈ …

Read More »