Breaking News

Daily Archives: ಏಪ್ರಿಲ್ 2, 2020

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಬಗ್ಗೆ ಜನರೇ ಮಾಹಿತಿ ನೀಡಿ; ಶ್ರೀರಾಮುಲು ಮನವಿ

ಬೆಂಗಳೂರು (ಏಪ್ರಿಲ್ 01); ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸುಮಾರು 2,000 ಜನ ಭಾಗವಹಿಸಿದ್ದಾರೆ. ಈ ಪೈಕಿ ಕರ್ನಾಟಕದಿಂದ 300 ಜನ ಭಾಗವಹಿಸಿದ್ದಾರೆ. ಹೀಗಾಗಿ ಈ ಸಭೆಯಲ್ಲಿ ಭಾಗವಹಿಸಿದವರ ಕುರಿತು ಜನ ಮಾಹಿತಿ ನೀಡಬೇಕಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಮಾತನಾಡಿರುವ ಅವರು, “ರಾಜ್ಯದಲ್ಲಿ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 40 ಜನ ಪತ್ತೆಯಾಗಿದ್ದಾರೆ. ಇವರ ಮಾದರಿಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ. ಉಳಿದವರ ಪತ್ತೆ …

Read More »

ಕೊರೊನಾ ಸೋಂಕು- ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಸಾವು

ಚಂಡೀಗಢ: ಕೊರೊನಾ ಸೋಂಕಿಗೆ ಒಳಗಾಗಿದ್ದ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಅವರು ಇಂದು ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ 62 ವರ್ಷದ ನಿರ್ಮಲ್ ಸಿಂಗ್ ಪಂಜಾಬ್‍ನ ಅಮೃತಸರ್ ನಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಸಿಂಗ್ ಅವರು ಇತ್ತೀಚೆಗೆ ವಿದೇಶದಿಂದ ಮರಳಿದ್ದರು, ಮಾರ್ಚ್ 30ರಂದು ಉಸಿರಾಟದ ತೊಂದರೆ, ತಲೆ ತಿರುಗುವುದರಿಂದಾಗಿ ಗುರು …

Read More »

ಚಿಕ್ಕೋಡಿ:ಮದ್ಯ ಸಿಗುತ್ತಿಲ್ಲವೆಂದು ಬಾವಿಗೆ ಹಾರಿ ಪ್ರಾಣ ಬಿಟ್ಟ

ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಮದ್ಯದ ಅಂಗಡಿ ಬಂದ್ ಆಗಿವೆ. ಪರಿಣಾಮ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಬಾವಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ. ಕೋಥಳಿ ಗ್ರಾಮದ ಪೋಪಟ್ ಈರಪ್ಪ ಬಡಿಗೇರಿ (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮದ್ಯದ ಅಂಗಡಿ ಬಂದ್ ಆಗಿದ್ದರಿಂದ ಪೋಪಟ್ ಸೋಮವಾರ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಕೋಥಳಿ ಗ್ರಾಮದ ಗಲ್ಲಿ ಗಲ್ಲಿ ಸುತ್ತಿ ನಾಪತ್ತೆಯಾಗಿದ್ದ. ಆದರೆ ಇಂದು …

Read More »

ಗ್ರಾಮಕ್ಕೆ ಬಂದಿದ್ದ ಆರೋಗ್ಯ ಸಿಬ್ಬಂದಿಗೆ ಕಲ್ಲೆಸದ ಗ್ರಾಮಸ್ಥರು

ಇಂದೋರ್: ಗ್ರಾಮಸ್ಥರ ಆರೋಗ್ಯ ಪರೀಕ್ಷೆಗಾಗಿ ಬಂದಿದ್ದ ಸಿಬ್ಬಂದಿ ಮೇಲೆ ಕೆಲವರು ಹಲ್ಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಟಾಟಪಟ್ಟಿಯಲ್ಲಿ ನಡೆದಿದೆ. ಗ್ರಾಮಸ್ಥರಿಂದ ತಪ್ಪಿಸಿಕೊಂಡು ಓಡಿ ಹೋಗ್ತಿರುವ ದೃಶ್ಯಗಳ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬುಧವಾರ ಒಂದೇ ದಿನ ಮಧ್ಯಪ್ರದೇಶದಲ್ಲಿ 12 ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಟಾವೆಲ್ ಹಿಸ್ಟರಿ ಹಿಡಿದು ವೈದ್ಯಕೀಯ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರನ್ನು ಥರ್ಮಲ್ ಸ್ಕ್ರೀನಿಂಗ್ ಗೆ …

Read More »