Breaking News

Daily Archives: ಏಪ್ರಿಲ್ 16, 2020

ಅಕ್ರಮ ಮದ್ಯ ಮಾರಾಟ ಪರಿಶೀಲನೆ- ಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಪೊಲೀಸರು

ಮಡಿಕೇರಿ: ಅಕ್ರಮ ಮದ್ಯ ಮಾರಾಟ ಪರಿಶೀಲನೆ ಮಾಡಲು ಹೋಗಿದ್ದ ಅಬಕಾರಿ ಪೊಲೀಸರು ಅಶ್ಲೀಲ ಪದಗಳಿಂದ ಒಬ್ಬರನೊಬ್ಬರು ನಿಂದಿಸಿ, ನಡು ಬೀದಿಯಲ್ಲೇ ಬಡಿದಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಪ್ಪ ನಡುಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಲಾಕ್‍ಡೌನ್ ಆಗಿರುವುದರಿಂದ ಎಲ್ಲಿಯೂ ಮದ್ಯ ಮಾರುವಂತಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಜನರು ಕಳ್ಳಬಟ್ಟಿ, ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಹೀಗಾಗಿ ಉಪ ಅಧೀಕ್ಷಕ ಶಿವಪ್ಪ …

Read More »

ಗ್ಯಾಸ್ ಏಜೆನ್ಸಿ ಮಾಲೀಕ ಪೊಲೀಸರು, ಪೌರ ಕಾರ್ಮಿಕರಿಗೆ ಬಿರಿಯಾನಿ ಊಟ ನೀಡುತ್ತಿದ್ದಾರೆ

ಕೋಲಾರ: ಕೊರೊನಾ ಮಹಾಮಾರಿ ಆವರಿಸಿದ್ದರಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ಕಳೆದ 21 ದಿನಗಳಿಂದ ನಮ್ಮನ್ನು ಕಾಯುತ್ತಿರುವ ಕೊರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಗೆ ಕೋಲಾರದಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು. ಕೋಲಾರದ ರೇವತಿ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಿಂದ ವಾರಕ್ಕೊಮ್ಮೆ ಬಿರಿಯಾನಿ ವಿತರಣೆ ಮಾಡಲಾಗುತ್ತಿದೆ. ಕೋಲಾರ ನಗರ ಹಾಗೂ ಬಂಗಾರಪೇಟೆ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ನಗರಸಭೆ ಸಿಬ್ಬಂದಿಗೆ ಬಿರಿಯಾನಿ ವಿತರಣೆ ಮಾಡಲಾಯಿತು. ಕಳೆದ ಬುಧವಾರವೂ ಹೀಗೆ ಕರ್ತವ್ಯದಲ್ಲಿದ್ದ ನೂರಾರು ಪೊಲೀಸರಿಗೆ ಬಿರಿಯಾನಿ …

Read More »

ವಿಜಯಪುರದಲ್ಲಿ 686 ಜನರ ಮೇಲೆ ನಿಗಾ, 335ಕ್ಕೂ ಹೆಚ್ಚು ಜನ ಐಸೋಲೇಷನ್‍ಗೆ

ವಿಜಯಪುರ: ಜಿಲ್ಲೆಯಲ್ಲಿ ಇಲ್ಲಿಯವರೆಗೆ 686 ಜನರ ಮೇಲೆ ನಿಗಾ ವಹಿಸಲಾಗಿದ್ದು, 335ಕ್ಕೂ ಹೆಚ್ಚು ಜನರನ್ನು ಐಸೋಲೇಷನ್‍ ನಲ್ಲಿ ಇಡಲಾಗಿದೆ. ಒಟ್ಟು 362 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 256 ಸ್ಯಾಂಪಲ್ ನೆಗೆಟಿವ್ ಬಂದಿವೆ, 10 ಪಾಸಿಟಿವ್ ಬಂದಿವೆ. ಅಲ್ಲದೆ ಇನ್ನೂ 96 ಪ್ರಕರಣಗಳ ಕುರಿತು ಫಲಿತಾಂಶ ಬರಬೇಕಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಮತ್ತೆ 60 ಸ್ಯಾಂಪಲ್ ಕಲೆಕ್ಟ್ ಮಾಡಿ ಪರೀಕ್ಷೆಗೆ ಕಳುಹಿಸಲಾಗುವದು. ಇಂದಿನ ಮೂರು …

Read More »

ಮಂಗಳೂರು:ಎರಡು ಸಾವಿರಕ್ಕಾಗಿ ಮುಗಿಬಿದ್ದ ಜನ……….

ಮಂಗಳೂರು: ಎರಡು ಸಾವಿರ ರೂಪಾಯಿ ಸಿಗುತ್ತದೆ ಎಂದು ಸಾಮಾಜಿಕ ಅಂತರವನ್ನೂ ಮರೆತು ಜನ ಮುಗಿಬಿದ್ದಿದ್ದು, ನೂಕುನುಗ್ಗಲು ಸಂಭವಿಸಿದೆ. ಮಂಗಳೂರು ನಗರದ ಕೂಳೂರಿನಲ್ಲಿ ಘಟನೆ ನಡೆದಿದ್ದು, ಶ್ರೀ ದೇವಿ ಪ್ರಸಾದ್ ಖಾಸಗಿ ಕಟ್ಟಡದಲ್ಲಿ ಕೂಲಿ ಕಾರ್ಮಿಕರ ಮಾಹಿತಿ ಪಡೆದು ಹಣ ಅಕೌಂಟ್‍ಗೆ ಹಾಕಲಾಗುತ್ತದೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿದ ಜನತೆ ಸಾಮಾಜಿಕ ಅಂತರವನ್ನು ಮರೆದು ಸುಮಾರು 600-750 ಜನರ ಗುಂಪು ಸಾಲಿನಲ್ಲಿ ಸೇರಿತ್ತು. ಯಾಕೆ ನಿಂತಿದ್ದೀರಿ ಎಂದು ಕೇಳಿದರೆ …

Read More »

ಧಾರವಾಡ:ಕೆನರಾ ಬ್ಯಾಂಕ್‍ನ ಎಲ್ಲ ಸಿಬ್ಬಂದಿ ಹೋಮ್ ಕ್ವಾರಂಟೈನ್

ಧಾರವಾಡ: ಧಾರವಾಡ ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕಿ(ಹಿಂದಿನ ಸಿಂಡಿಕೇಟ್ ಬ್ಯಾಂಕ್)ನ ಎಲ್ಲ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್‍ನಲ್ಲಿಡಲಾಗಿದೆ. ಕೊರೊನಾ ಪಾಸಿಟಿವ್ ಬಂದಿರುವ ಧಾರವಾಡ ಜಿಲ್ಲೆಯ ರೋಗಿ ನಂ.194 ಮಾ.19ರಂದು ಪ್ರಯಾಣಿಸಿದ ಮುಂಬೈ- ಹುಬ್ಬಳ್ಳಿ ವಿಆರ್‍ಎಲ್ ಬಸ್ ಮೂಲಕವೇ ಧಾರವಾಡ ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕ್ (ಹಿಂದಿನ ಸಿಂಡಿಕೇಟ್ ಬ್ಯಾಂಕ್)ನ ಸಿಬ್ಬಂದಿಯೊಬ್ಬರ ಪುತ್ರನೂ ಆಗಮಿಸಿದ್ದರು. ಇವರು ರೋಗಿ ನಂ.194 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ಪರಿಗಣಿಸಿ ಸರ್ಕಾರಿ ಕ್ವಾರಂಟೈನ್ …

Read More »