Breaking News

Daily Archives: ಏಪ್ರಿಲ್ 21, 2020

ಲಾಕ್ ಡೌನ ಸಂಕಟ ರಕ್ತ ಹೀರುವ ರೀತಿ ವ್ಯಾಪಾರಸ್ಥರು ಬೇಕಾಬಿಟ್ಟಿ ದರದಲ್ಲಿ ಮಾರಾಟ……

ಹಾಸನ; ಕೊರೋನಾ ಹಾಗೂ ಲಾಕ್ ಡೌನ ಸಂಕಟದೊಂದಿಗೆ ಸಾಮಾನ್ಯ ಜನರ ರಕ್ತ ಹೀರುವ ರೀತಿ ವ್ಯಾಪಾರಸ್ಥರು ಆಹಾರ ಹಾಗೂ ದಿನಸಿ ಪದಾರ್ಥಗಳನ್ನು ಬೇಕಾಬಿಟ್ಟಿ ದರದಲ್ಲಿ ಮಾರಾಟಕ್ಕೆ ಇಳಿದಿದ್ದಾರೆ. ಕೊರೋನಾ ಸೋಂಕಿನ ಕಾರಣ ಹೈರಾಣಾಗಿರೊ ಸಾಮಾನ್ಯ ವರ್ಗದ ಜನರಿಗೆ ಲಾಕ್ ಡೌನ್ ನಂತರ… ಇತ್ತ ಕೆಲಸಕ್ಕು ಹೋಗಲಾಗದೆ ದುಡಿದು ಕೂಡಿಟ್ಟ ಅಲ್ಪಸ್ವಲ್ಪ ಹಣವನ್ನೆ ನಂಬಿ ಬದುಕುತ್ತಿದ್ದಾರೆ .ಈ ನಡುವೆ ದಿನಸಿ ಪದಾರ್ಥಗಳನ್ನು ಕೊಳ್ಳಲು ಹೋದರೆ ನಿಗದಿತ ಬಲೆಗಿಂತ‌ಲೂ ಹೆಚ್ಚಿನ ದರಕ್ಕೆ ಮಾರಾಟ‌ …

Read More »

ಏ.30ರ ವರೆಗೆ ಉಚಿತ ಹಾಲು ವಿತರಣೆ …….

ಬೆಂಗಳೂರು : ಕೆ.ಎಂ.ಎಫ್ ನಿಂದ ರಾಜ್ಯದಲ್ಲಿ ವಾಸಿಸುತ್ತಿರುವ ಕೊಳಚೆ ಪ್ರದೇಶದ ಜನರಿಗೆ, ಅಲೆಮಾರಿಗಳಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ನಿತ್ಯ ಉಚಿತವಾಗಿ ಹಾಲು ವಿತರಣೆಯಾಗುತ್ತಿದ್ದು ಸದ್ಯ ಈ ತಿಂಗಳ ಅಂತ್ಯದವರೆಗೂ ಇದನ್ನು ವಿಸ್ತರಣೆ ಮಾಡಬೇಕು ಎಂದು ಮಾನ್ಯ ಮುಖ್ಯಮಂತ್ರಿಯವರಿಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರಿಕೊಂಡಿದ್ದೆ ಅದರಂತೆಯೇ ಎಪ್ರೀಲ್ 30ರ ವರೆಗೆ ಉಚಿತ ಹಾಲು ನೀಡಲು ನಿನ್ನೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಒಪ್ಪಿಗೆ ಸೂಚಿಸಿದ್ದು ಸಂತಸ ತಂದಿದೆ …

Read More »

ಮೊಬೈಲ್ ಅವಾಂತರದ ಚಿತ್ರಣ ನೀಡಿದ ಕೆಜಿಎಫ್ ಸಂಗೀತ ನಿರ್ದೇಶಕ…….

ಬೆಂಗಳೂರು: ಲಾಕ್‍ಡೌನ್ ದಿನಗಳನ್ನು ಎಲ್ಲ ನಟ, ನಟಿಯರು ವಿಭಿನ್ನವಾಗಿ ಬಳಸಿಕೊಳ್ಳುತ್ತಿದ್ದು, ಕೆಲವರು ತಮ್ಮ ಹವ್ಯಾಸಗಳತ್ತ ತಿರುಗಿದರೆ, ಇನ್ನೂ ಕೆಲವರು ಮನರಂಜನೆ, ಸಾಮಾಜಿಕ ಕಾರ್ಯ, ಸಹಾಯದ ರೀತಿಯ ಕೆಲಸಗಳಲ್ಲಿ ತೊಡಗಿದ್ದಾರೆ. ಬಿಡುವಿದ್ದಾಗಲೆಲ್ಲ ಕಮ್ಮಾರಿಕೆ ಮಾಡುವ ಮೂಲಕ ತಂದೆಗೆ ನೆರವಾಗುತ್ತಿದ್ದ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಇಂದು ಮೊಬೈಲ್ ದುರ್ಬಳಕೆಯ ಅವಾಂತರಗಳ ಕುರಿತು ಗಮನ ಸೆಳೆದಿದ್ದಾರೆ. ಹೌದು ಯುವಕರಿಗೆ ಅಪ್ಯಾಯಮಾನವಾಗುವ ರೀತಿಯಲ್ಲಿ ಮೊಬೈಲ್ ಕುರಿತು ಜಾಗೃತಿ ಮೂಡಿಸಿರುವ ರವಿ ಬಸ್ರೂರ್, ಸಂಗೀತದ …

Read More »

ಲಕ್ಷಾಂತರ ಮೌಲ್ಯದ ತರಕಾರಿಯನ್ನ ಉಚಿತವಾಗಿ ಹಂಚಿದ ರೈತ……..

ಚಾಮರಾಜನಗರ: ಕೊರೊನಾ ಲಾಕ್‍ಡೌನ್ ಪರಿಣಾಮದಿಂದಾಗಿ ಗಡಿ ಜಿಲ್ಲೆಯ ಜನರು ಪರದಾಡುತ್ತಿದ್ದಾರೆ. ರೈತರು ಕೂಡ ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೇ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಇಲ್ಲೊಬ್ಬ ರೈತ ಲಕ್ಷಾಂತರ ರೂಪಾಯಿ ಮೌಲ್ಯದ ತರಕಾರಿಯನ್ನು ಕಾಡಂಚಿನ ಜನರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಬಸವನಗುಡಿ ಗ್ರಾಮದ ಬೆಳ್ಳುಳ್ಳಿ ಮಾದೇಶ ತಮ್ಮ ಐದು ಎಕರೆ ಜಮೀನಿನಲ್ಲಿ, ಎಲೆಕೋಸು, ಮೆಣಸಿನಕಾಯಿ, ಬದನೆಕಾಯಿ, ಕರಿಬೇವಿನಸೊಪ್ಪು ಬೆಳೆದಿದ್ದರು. ಆದರೆ ಈ …

Read More »

ಸಾರ್ವಜನಿಕರೇ, ಕೊರೊನಾ ಕುರಿತ ಪ್ರಶ್ನೆ ಕೇಳಿ – ಉತ್ತರ ನೀಡುತ್ತೆ ಕೇಂದ್ರ ಸರ್ಕಾರ

ನವದೆಹಲಿ: ಬೆನ್ನು ಬಿಡದೆ ಕಾಡುತ್ತಿರುವ ಕೊರೊನಾ ವೈರಸ್ ಸಂಬಂಧ ಸಾರ್ವಜನಿಕರಲ್ಲಿ ನೂರಾರು ಪ್ರಶ್ನೆಗಳಿವೆ. ಈ ಗೊಂದಲಗಳನ್ನು ಬಗೆಹರಿಸಲು ಈಗ ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದ್ದು, ವಿನೂತನ ಪ್ರಯೋಗವೊಂದನ್ನು ಆರಂಭಿಸಿದೆ. ಟ್ವಿಟರ್‌ನಲ್ಲಿ @CovidIndiaSeva ಗೆ ಸಾರ್ವಜನಿಕರು ನೇರವಾಗಿ ತಮ್ಮ ಪ್ರಶ್ನೆಗಳನ್ನು ಟ್ವೀಟ್ ಮಾಡಬಹುದಾಗಿದೆ. ಜನರ ಪ್ರಶ್ನೆಗಳಿಗೆ ಇನ್ಮುಂದೆ ಕೇಂದ್ರ ಆರೋಗ್ಯ ಇಲಾಖೆ ಉತ್ತರಿಸಲಿದೆ. ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಇತ್ತೀಚಿನ ಹೊಸ ಮಾಹಿತಿಗಳು, ಸಾರ್ವಜನಿಕರ ಪ್ರಶ್ನೆಗಳು, ಆರೋಗ್ಯ ಸೇವೆಗಳು, …

Read More »

ಪಾದರಾಯನಪುರ ರಹಸ್ಯ ಬಯಲು – ಮಸೀದಿಯಲ್ಲಿ ವಿದೇಶಿ ತಬ್ಲಿಘಿಗಳಿಗೆ ಆಶ್ರಯ

ಬೆಂಗಳೂರು: ಈಗ ಎಲ್ಲಿ ನೋಡಿದ್ರೂ ಬೆಂಗಳೂರಿನ ಪಾದರಾಯನಪುರದ್ದೇ ಚರ್ಚೆ. ಕೊರೊನಾ ವಾರಿಯರ್ಸ್ ಮೇಲೆ ಸಾಮೂಹಿಕವಾಗಿ ದಾಳಿ ನಡೆಸಿದ ಬಳಿಕ ಪಾದರಾಯನಪುರದೊಳಗಿನ ಒಂದೊಂದೇ ರಹಸ್ಯಗಳು ಬಯಲಾಗ್ತಿವೆ. ಪಾದರಾಯನಪುರಕ್ಕೆ ವಿದೇಶಿ ತಬ್ಲಿಘಿಗಳ ನಂಟಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇಲ್ಲಿನ ಮಸೀದಿಯೊಂದರಲ್ಲಿ ಪಾಸ್‍ಪೋರ್ಟ್ ಅವಧಿ ಮುಗಿದ ಇಂಡೋನೇಷ್ಯಾ ಮತ್ತು ಕಿರ್ಗಿಸ್ಥಾನದ 19 ಮಂದಿಗೆ ಆಶ್ರಯ ನೀಡಲಾಗಿತ್ತು. ಈ ವಿಚಾರ ಶಾಸಕ ಜಮೀರ್ ಅಹ್ಮದ್ ಮತ್ತು ಕಾರ್ಪೋರೇಟರ್ ಇಮ್ರಾನ್ ಪಾಶಾಗೆ ಗೊತ್ತಿದ್ದರೂ ಮುಚ್ಚಿಟ್ಟಿದ್ದರು ಎಂಬ ಆರೋಪ …

Read More »

ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದ ದುಡಿಯುವ ಕೈಗಳಿಗೆ ಕೆಲಸ ನೀಡಿದ ಈಶ್ವರಪ್ಪ

ಶಿವಮೊಗ್ಗ: ದೇಶವೇ ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದು, ಅದೆಷ್ಟೋ ದುಡಿಯುವ ಮಂದಿ ಕೈಕಟ್ಟಿ ಮನೆಯಲ್ಲೇ ಕುಳಿತುಕೊಳ್ಳುವಂತಹ ಸ್ಥಿತಿ ಎದುರಾಗಿದೆ. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮಾತ್ರ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿ ನಡೆಸಿದ್ದಾರೆ. ಕೊರೊನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ, ದೂರ ದೂರ ನಿಂತು ಕೆಲಸ ಮಾಡುವಂತೆ ಸೂಚನೆ ಕೂಡ ನೀಡಿದ್ದು, ಜಿಲ್ಲೆಯ …

Read More »

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ- ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್”….

ಚಿಕ್ಕಮಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣ ಹಸಿ ಇರುವಾಗಲೇ ಕಾಫಿನಾಡಲ್ಲೂ ಅಂತಹದ್ದೊಂದು ಪ್ರಕರಣ ನಡೆದಿದೆ. ರಸ್ತೆ ಬದಿಯಲ್ಲಿ ಕಸದ ಆಟೋ ನಿಲ್ಲಿಸಿದ್ದರು ಎಂಬ ಕಾರಣಕ್ಕೆ ಏಕಾಏಕಿ ಮಹಿಳೆ ಹಾಗೂ ಪುರುಷ ಪೌರಕಾರ್ಮಿಕರ ಮೇಲೆ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಉಪ್ಪಳ್ಳಿಯ ಮಸೀದಿ ಸಮೀಪದ ತಮೀಮ್ ಬಂಧಿತ. ಆಟೋದಲ್ಲಿದ್ದ ಮಂಜುನಾಥ್, ಯೇಸು ಹಾಗೂ ಮಹಿಳಾ ಕಾರ್ಮಿಕರ ಮೇಲೂ ತಮೀಮ್ ಹಲ್ಲೆಗೈದಿದ್ದು, ಯೇಸು ಅವರ ಶರ್ಟ್ ಹರಿದು …

Read More »

ಕೋವಿಡ್-19 ಪರಿಹಾರ ನಿಧಿಗೆ ಧಾರವಾಡ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ.

ಧಾರವಾಡ: ಕೋವಿಡ್-19 ಪರಿಹಾರ ನಿಧಿಗೆ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸವರಾಜ ನೀಲಪ್ಪ ಗಾಣಿಗೇರ ಅವರು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಿದ್ದಾರೆ. ಬಸವರಾಜ ಅವರು ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ನಿವಾಸಿಯಾಗಿದ್ದು, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಒಂದನೇ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಚೆಕ್ ಸ್ವೀಕರಿಸಿದ …

Read More »

ಅಮೆರಿಕದಲ್ಲಿ ಮೈಸೂರಿನ ವೈದ್ಯೆಗೆ ವಿಶೇಷ ಗೌರವ……….

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸೇವೆ ಸಲ್ಲಿಸಿ ಮನೆಗೆ ಮರಳಿದ ಮೈಸೂರು ಮೂಲದ ವೈದ್ಯೆ ಉಮಾ ಮಧುಸೂದನ್ ಅವರಿಗೆ ವಿಶೇಷ ಗೌರವ ಸಿಕ್ಕಿದೆ. ಓಕ್‍ಲ್ಯಾಂಡ್‍ನ ಸೌತ್ ವಿಂಡ್ಸರ್ ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತ ಡಾ.ಉಮಾ ಮಧುಸೂದನ್ ಅವರಿಗೆ ಡ್ರೈವ್ ಆಫ್ ಹಾನರ್ ಮೂಲಕ ಗೌರವ ಸಲ್ಲಿಸಿದೆ. ವೈದ್ಯ ಉಮಾ ಅವರ ಮನೆ ಎದುರು ನೂರಾರು ವಾಹನಗಳಲ್ಲಿ ಬಂದ ಜನ, ಅಂಬುಲೆನ್ಸ್ ಸಿಬ್ಬಂದಿ, ಅಗ್ನಿಶಾಮಕ ಪಡೆ, ಅಧಿಕಾರಿಗಳು ನಿಮ್ಮ ಸೇವೆ ಅನನ್ಯ …

Read More »