ಬೈಲ್ ಹೊಂಗಲ್: ಲಾಕ್ ಡೌನ್: ಅಬಕಾರಿ ದಾಳಿ-ಕಳ್ಳಬಟ್ಟಿ, 2- ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 78800 ಸಾವಿರ ಮೌಲ್ಯದ ವಸ್ತು ಜಪ್ತಿ. ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳನ್ನು ತಡೆಯಲು ಜಿಲ್ಲಾ ಅಬಕಾರಿ ಇಲಾಖೆಯು ತಂಡಗಳನ್ನು ರಚಿಸಿದ್ದು. ಈ ಸಂದರ್ಭದಲ್ಲಿ ಬೈಲಹೊಂಗಲ ತಾಲೂಕಿನಲ್ಲಿರುವ …
Read More »Daily Archives: ಏಪ್ರಿಲ್ 28, 2020
ಮಗನ ಮದ್ವೆಗೆ ಖರ್ಚು ಮಾಡಬೇಕಿದ್ದ 5.5 ಕೋಟಿ ವೆಚ್ಚದಲ್ಲಿ 2 ಕ್ಷೇತ್ರಕ್ಕೆ ಆಹಾರ ಕಿಟ್ ವಿತರಣೆ: ಎಚ್‍ಡಿಕೆ
ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರು ರಾಮನಗರ ಮತ್ತು ಚನ್ನಪಟ್ಟಣ ಜನರಿಗೆ ದಿನಸಿ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಮನಗರದ ಮಂಜುನಾಥ ಕನ್ವೆನ್ಷನ್ ಹಾಲ್‍ನಲ್ಲಿ ದಿನಸಿ ಕಿಟ್ ವಿತರಣೆ ಮಾಡಲು ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸೊಸೆ ರೇವತಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೊದಲ ಬಾರಿಗೆ ಕುಟುಂಬದ ಜೊತೆ ನಿಖಿಲ್ ಪತ್ನಿ ರೇವತಿ ಕೂಡ ಆಗಮಿಸಿದ್ದರು. ಸುಮಾರು …
Read More »ಕೊರೊನಾ ಹೋರಾಟಕ್ಕಾಗಿ 18 ವರ್ಷಗಳ ನಂತ್ರ ಮತ್ತೆ ನರ್ಸ್ ಆದ ಮೇಯರ್
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮೇಯರ್ 18 ವರ್ಷಗಳ ನಂತರ ಮತ್ತೆ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಮೇಯರ್ ಕಿಶೋರಿ ಪೆಡ್ನೇಕರ್ ಅವರು ಕೊರೊನಾ ವಿರುದ್ಧದ ಹೋರಾಟದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಈ ಮೂಲಕ ವೈದ್ಯಕೀಯ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಕಿಶೋರಿ ಪೆಡ್ನೇಕರ್ ರಾಜಕೀಯಕ್ಕೆ ಬರುವ ಮೊದಲು ನರ್ಸ್ …
Read More »ಯಾರ ಸಂಪರ್ಕಕ್ಕೆ ಬಾರದೇ ಇದ್ದರೂ ಕೊರೊನಾ ಬಂದಿದ್ದು ಹೇಗೆ ಎನ್ನುವ ಪ್ರಶ್ನೆಗೆ ಆರೋಗ್ಯ ಅಧಿಕಾರಿಗಳಿಗೆ ಕೊನೆಗೆ ಉತ್ತರ ಸಿಕ್ಕಿದೆ.
ಬೆಂಗಳೂರು: ಕರ್ನಾಟಕದಲ್ಲಿ ಇಂದು 8 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಯಾರ ಸಂಪರ್ಕಕ್ಕೂ ಸಿಗದ ಪಾದರಾಯನಪುರದ ವ್ಯಕ್ತಿಗೆ ಕೊರೊನಾ ಬಂದಿದೆ. 48 ವರ್ಷದ ವ್ಯಕ್ತಿ(ರೋಗಿ 513) ನಾನು ಲಾಕ್‍ಡೌನ್ ಬಳಿಕ ಮನೆಯಲ್ಲೇ ಇದ್ದೆ ಹೊರಗಡೆ ಹೋಗಿಲ್ಲ ಎಂದು ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೇ ಪಾಸಿಟಿವ್ ಅಲ್ಲದ ವ್ಯಕ್ತಿಗಳ ಜೊತೆಗೂ ನಾನು ಸಂಪರ್ಕ ಹೊಂದಿಲ್ಲ. ವಿದೇಶಕ್ಕೆ ಹೋಗಿಲ್ಲ. ವಿದೇಶ ಹೋಗಿ ಬಂದವರ ಜೊತೆ ಸಂಪರ್ಕವನ್ನು ಮಾಡಿಲ್ಲ ಎಂದು ಹೇಳಿದ್ದಾರೆ. ಯಾರ ಸಂಪರ್ಕಕ್ಕೆ …
Read More »ಗದಗ್‍ನಲ್ಲಿ ವೃದ್ಧನಿಗೆ ಕೊರೊನಾ- ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ………..
ಗದಗ: ಜಿಲ್ಲೆಯಲ್ಲಿ ಟ್ರಾವೆಲ್ ಹಿಸ್ಟರಿಯೇ ಇಲ್ಲದ 75 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಸೋಂಕಿತ ವೃದ್ಧನಿಗೆ(ರೋಗಿ-514)ಗೆ ಯಾರ ಸಂಪರ್ಕವೂ ಇರಲಿಲ್ಲ. ಹೆಲ್ತ್ ಇನ್ಸ್ ಪೆಕ್ಟರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರು ನಗರದ ಗಂಜಿಬಸವೇಶ್ವರ ಸರ್ಕಲ್ ಬಳಿ ನಿವಾಸಿಯಾಗಿದ್ದು, ಮನೆಯಲ್ಲಿ ಸೋಂಕಿತ ವ್ಯಕ್ತಿ ಸೇರಿಸಿ ಒಟ್ಟು 9 ಮಂದಿ ಸದಸ್ಯರು ವಾಸವಿದ್ದರು. ಮನೆಯಲ್ಲಿದ್ದ 8 ಜನರ …
Read More »ಬಾರ್ ಓಪನ್ ಆಗಿದೆ ಅಂತ ಓಡೋಡಿ ಬಂದು ಏನೂ ಸಿಗದೆ ವಾಪಸ್ಸಾದ್ರು!
ಚಿಕ್ಕಮಗಳೂರು: ಬಾರ್ ಓಪನ್ ಆಗಿದೆ ಎಂದು ಓಡೋಡಿ ಬಂದ ಮದ್ಯ ಪ್ರಿಯರು ಬಳಿಕ ನಿರಾಸೆಗೊಂಡ ಘಟನೆ ಕಡೂರು ತಾಲೂಕಿನ ಯಗಟಿ ಬಳಿಯ ಯಳ್ಳಂಬಳಸೆ ಗ್ರಾಮದಲ್ಲಿ ನಡೆದಿದೆ. ಜನ ಎಷ್ಟರ ಮಟ್ಟಿಗೆ ಎಣ್ಣೆ-ಎಣ್ಣೆ ಅಂತಿದ್ದಾರೆ ಅಂದ್ರೆ ಬೆಳಗೆದ್ದು ದೇವರ ಮುಖ ನೋಡ್ತಾರೋ ಇಲ್ವೋ ಗೊತ್ತಿಲ್ಲ. ಆದರೆ ಎಣ್ಣೆ ಅಂಗಡಿ ಓಪನ್ ಆಗುತ್ತಾ, ಸಿಎಂ ಏನಾದರೂ ಹೇಳ್ತಾರಾ ಅಂತ ಟಿವಿ ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಯಗಟಿ ಬಳಿ ಓರ್ವ ಎಣ್ಣೆ ಅಂಗಡಿ …
Read More »ಈರುಳ್ಳಿಗೆ ಬೆಲೆ ಸಿಗ್ತಿಲ್ಲವೆಂದು ವಿಡಿಯೋ ಮಾಡಿದ್ದ ರೈತ ಮಹಿಳೆ – ಫೋನ್ ಮಾಡಿ ಧೈರ್ಯಹೇಳಿದ:B.S.Y. ಹೇಳಿದ ಸಿಎಂ
ಚಿತ್ರದುರ್ಗ: ಕೊರೊನಾ ಹರಡದಂತೆ ಭಾರತ ಲಾಕ್‍ಡೌನ್ ಆಗಿದೆ. ಇದರಿಂದ ಅನೇಕರು ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ನಷ್ಟ ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈರುಳ್ಳಿ ಬೆಳೆದ ರೈತ ಮಹಿಳೆ ಸರಿಯಾಗಿ ಬೆಲೆ ಸಿಗುತ್ತಿಲ್ಲ ಎಂದು ವಿಡಿಯೋ ಮಾಡಿ ತಮ್ಮ ನೋವನ್ನು ಹೇಳಿಕೊಂಡಿದ್ದರು. ಇದೀಗ ರೈತ ಮಹಿಳೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಫೋನ್ ಮಾಡಿ ಧೈರ್ಯ ಹೇಳಿದ್ದಾರೆ. ಜಿಲ್ಲೆಯ ಹಿರಿಯೂರು ತಾಲೂಕಿನ ಕಾಟನಾಯನಕನಹಳ್ಳಿ ರೈತ ಮಹಿಳೆ ವಸಂತಕುಮಾರಿ ವಿಡಿಯೋ ಮಾಡುವ ಮೂಲಕ ಸಿಎಂ …
Read More »ಪ್ರಧಾನ ಮಂತ್ರಿ ಮತ್ತು ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಪ್ರತ್ಯೇಕವಾಗಿ 111000/- ರಂತೆ 222000/- ಗಳ ಚೆಕ್ ಸಲ್ಲಿಸಿದಶಿವನಪ್ಪ ಬಿ ಖಣಗಣ್ಣಿ…
ಬೆಳಗಗಾವಿ, .: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಶಿವನಪ್ಪ ಬಿ ಖಣಗಣ್ಣಿ ಅವರು ಕೋವಿಡ್ ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿ ಮತ್ತು ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಪ್ರತ್ಯೇಕವಾಗಿ 111000/- ರಂತೆ 222000/- ಗಳ ಚೆಕ್ ನ್ನು ಮಂಗಳವಾರ (ಏ.28) ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು. ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಚೆಕ್ ಸ್ವೀಕರಿಸಿದರು. ಆರೋಗ್ಯ ಇಲಾಖೆಯ ವಿಭಾಗೀಯ ಸಹ ನಿರ್ದೇಶಕರಾದ ಡಾ.ಅಪ್ಪಾಸಾಹೇಬ್ ನರಟ್ಟಿ, ಜಿಲ್ಲಾ ಆರೋಗ್ಯ ಮತ್ತು …
Read More »ರಾಜ್ಯದಲ್ಲಿ 4 ಮಂದಿ ಕೊರೊನಾ ಸಚಿವರಿದ್ದಾರೆ: ಪ್ರಿಯಾಂಕ್ ಖರ್ಗೆ:ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕಲಬುರಗಿ: ರಾಜ್ಯದಲ್ಲಿ 4 ಮಂದಿ ಕೊರೊನಾ ಸಚಿವರಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಲ್ಕು ಮಂದಿ ಕೊರೊನಾ ಸಚಿವರಿದ್ದಾರೆ. ಸುರೇಶ್ ಕುಮಾರ್ ಬರ್ತಾರೆ ನ್ಯೂಸ್ ಬುಲೆಟಿನ್ ಓದಿ ಹೇಳ್ತಾರೆ. ಹಾಗೆ ನೋಡಿದರೆ ಸುರೇಶ್ ಕುಮಾರ್ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಇಲ್ಲ ಎಂದು ಕಿಡಿಕಾರಿದರು. ಪ್ರತಿ ಜಿಲ್ಲೆಗೆ ಲ್ಯಾಬ್ ತೆಗೆಯುವುದಾಗಿ ಹೇಳಿದರು. ಆದರೆ ಇಲ್ಲಿಯವರೆಗೆ ಸರ್ಕಾರ …
Read More »ಸಿ ಆ ಪಿ ಎಫ್ ಯೋಧನಿಗೆ ಜಾಮೀನು,ಆದೇಶದೊಂದಿಗೆ ವಕೀಲರು ಚಿಕ್ಕೋಡಿಯಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಯಾಣ..
ಬೆಳಗಾವಿ- ಇತ್ತೀಚಿಗೆ ಯಕ್ಸಂಬಾದಲ್ಲಿ ಇಬ್ಬರು ಪೋಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಮಂಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿ ಆ ಪಿ ಎಫ್ ಯೋಧನಿಗೆ ಜಾಮೀನು ಸಿಕ್ಕಿದೆ. *ಚಿಕ್ಕೋಡಿ 1ನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯ 1ನೇ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ನೀಡಿದೆ. ಮಾಸ್ಕ್ ಹಾಕದ ವಿಚಾರಕ್ಕೆ ಪೇದೆ – ಸಿಆರ್‌ಪಿಎಫ್ ಯೋಧನ ಮಧ್ಯೆ ಗಲಾಟೆ ನಡೆದಿತ್ತು ಕರ್ತವ್ಯನಿರತ ಪೇದೆ ಮೇಲೆ ಹಲ್ಲೆ …
Read More »
Laxmi News 24×7