Breaking News

Monthly Archives: ಏಪ್ರಿಲ್ 2020

ಪ್ರಭಾಸ್ ಜೊತೆ ಮದ್ವೆ- ಮೌನ ಮುರಿದ ನಿಹಾರಿಕಾ……….

ಹೈದರಾಬಾದ್: ಬಾಹುಬಲಿ ಖ್ಯಾತಿಯ ಪ್ರಭಾಸ್ ಇತ್ತೀಚೆಗೆ ವಿವಾಹದ ವಿಚಾರವಾಗಿ ಸುದ್ದಿಯಾಗುತ್ತಿದ್ದು, ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಜೊತೆ ಸುತ್ತಾಡುವ ಮೂಲಕ ಇವರಿಬ್ಬರು ವಿವಾಹವಾಗಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ನಂತರ ಸ್ವತಃ ಅನುಷ್ಕಾ ಶೆಟ್ಟಿ ಅವರೇ ಈ ಕುರಿತು ಪ್ರತಿ ಪ್ರತಿಕ್ರಿಯಿಸಿ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಮೆಗಾ ಫ್ಯಾಮಿಲಿ ಜೊತೆಗೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಹೌದು ಅನುಷ್ಕಾ ಶೆಟ್ಟಿ ಬಳಿಕ ಇದೀಗ …

Read More »

ವಲಸೆ, ಕೂಲಿ ಕಾರ್ಮಿಕರು ಸ್ಥಳಾಂತರಕ್ಕೆ ಅವಕಾಶ – ಷರತ್ತುಗಳು ಅನ್ವಯ

ಬೆಂಗಳೂರು: ವಲಸೆ ಮತ್ತು ಕೂಲಿ ಕಾರ್ಮಿಕರ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಕೆಎಸ್‍ಆರ್‍ ಟಿಸಿ ಬಸ್ ಗಳ ಮೂಲಕ ಕಾರ್ಮಿಕರನ್ನು ಸ್ಥಳಾಂತರ ಮಾಡಬಹುದಾಗಿದೆ. ಸ್ಥಳಾಂತರ ಮಾಡುವಾದ ಶೇ.40ರಷ್ಟು ಜನರನ್ನು ಮಾತ್ರ ಬಸ್ ನಲ್ಲಿ ಕರೆದುಕೊಂಡ ಹೋಗವುದರ ಜೊತೆಗೆ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾರ್ಮಿಕರನ್ನು ಹೊರ ರಾಜ್ಯಗಳಿಗೆ ಸ್ಥಳಾಂತರ ಮಾಡುವಂತಿಲ್ಲ. ರಾಜ್ಯದ ಜಿಲ್ಲೆಗಳಲ್ಲಿ ಮಾತ್ರ ಸ್ಥಳಾಂತರ ಅವಕಾಶ ನೀಡಲಾಗಿದೆ. ಕೂಲಿ …

Read More »

ವೈದ್ಯರ ಸಲಹೆ ಪಡೆದು ಮದ್ಯ ಸೇವನೆ ಬಿಟ್ಬಿಡಿ: ಅಬಕಾರಿ ಸಚಿವ ನಾಗೇಶ್ ಸಲಹೆ

ಕೋಲಾರ: ಮದ್ಯವ್ಯಸನಿಗಳೇ ಬೇರೆ ಮದ್ಯಪ್ರಿಯರೇ ಬೇರೆ ಎನ್ನುವ ಮೂಲಕ ಮದ್ಯಪಾನಿಗಳ ಬಗ್ಗೆ ಸಚಿವ ಎಚ್.ನಾಗೇಶ್ ವಿಭಿನ್ನ ರೀತಿಯಲ್ಲಿ ವಿಶ್ಲೇಷಣೆ ನೀಡಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರ ಸುರಕ್ಷತೆಗಾಗಿಯೇ ಮದ್ಯ ಬಂದ್ ತೀರ್ಮಾನ ಮಾಡಿದ್ದೇವೆ. ವೈದ್ಯರಿಂದ ಸಲಹೆ ಪಡೆದುಕೊಂಡು ಚಟವನ್ನು ಬಿಟ್ಡು ಬಿಡಿ ಎಂದು ಕಿವಿ ಮಾತು ಹೇಳಿದ್ರು. ತಾಳ್ಮೆ, ಚಟ ತ್ಯಜಿಸಿ ಕೌನ್ಸಿಲಿಂಗ್ ಮಾಡಿಸಿಕೊಳ್ಳಿ. ಮದ್ಯ ಬಿಟ್ಟು ಕುಟುಂಬದ ಜೊತೆ ಚೆನ್ನಾಗಿರಿ. ಇನ್ನೂ ಇದೆ …

Read More »

ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧ……..

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ದಿವಂಗತ ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧವಾಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ದ್ವಿತೀಯ ಪುತ್ರ ಯುವರಾಜ್ ಕುಮಾರ್ ಯುವ-01 ಚಿತ್ರದ ಮೂಲ ಚಂದನವನಕ್ಕೆ ಬಲಗಾಲಿಟ್ಟು ಬರುತ್ತಿದ್ದಾರೆ. ತಾತನ ಹುಟ್ಟು ಹಬ್ಬದಂದು ಮೊಮ್ಮಗನ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ನಟ ಯುವರಾಜ್ ಕುಮಾರ್ ಖಡಕ್ ಲುಕ್‍ಗೆ ಸಖತ್ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವರಾಜ್ ಕುಮಾರ್ ಲುಕ್‍ಗೆ …

Read More »

ಮಂಗಗಳಲ್ಲಿ ಕಾಣಿಸಿಕೊಂಡ ಕೆಮ್ಮು, ಸುಸ್ತು: ಗ್ರಾಮದಲ್ಲಿ ಆತಂಕ…….

ಕೋಲಾರ: ನಿತ್ಯ ತರ್ಲೆ ಮಾಡೋ ಕೋತಿಗಳು ಇದ್ದಕ್ಕಿದಂತೆ ಮಂಕಾಗಿವೆ. ಕಳೆದ ಕೆಲವು ದಿನಗಳಿಂದ ಈ ಕೋತಿಗಳ ಆರೋಗ್ಯದಲ್ಲಾದ ಏರು ಪೇರು ಇಡೀ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಕೊರೊನಾ ಆತಂಕದ ನಡುವೆ ಕೋತಿಗಳು ಮಂಕಾಗಿರುವುದು ಜನರಲ್ಲಿ ಭಯ ಹುಟ್ಟಿಸಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕೋಡುಗುರ್ಕಿ ಗ್ರಾಮದಲ್ಲಿ ಮಂಗಗಳು ಈ ರೀತಿ ವರ್ತಿಸುತ್ತಿದ್ದು, ಕೆಲವು ನಿತ್ರಾಣವಾಗಿ ಮಲಗಿದರೆ, ಇನ್ನೂ ಕೆಲವು ಏಳಲು ಸಾಧ್ಯವಾಗದೇ ಅಸಹಾಯಕ ಸ್ಥಿತಿಯಲ್ಲಿ ನೋಡುತ್ತಿವೆ. ಇನ್ನೂ ಹಲವು ಕೋತಿಗಳು …

Read More »

ಶುಕ್ರವಾರ ಪತ್ತೆಯಾದ ಎರಡು ಪ್ರಕರಣಗಳು ಬೆಂಗಳೂರು ದಕ್ಷಿಣದ ಜನರಲ್ಲಿ ಆತಂಕವನ್ನ ಹೆಚ್ಚು ಮಾಡಿವೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಶುಕ್ರವಾರ ಒಂದೇ ದಿನ 19 ಮಂದಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಶುಕ್ರವಾರ ಪತ್ತೆಯಾದ ಎರಡು ಪ್ರಕರಣಗಳು ಬೆಂಗಳೂರು ದಕ್ಷಿಣದ ಜನರಲ್ಲಿ ಆತಂಕವನ್ನ ಹೆಚ್ಚು ಮಾಡಿವೆ. ರೋಗಿ ನಂಬರ್ 465 ಮತ್ತು 466 ಇಬ್ಬರು ಸೋಂಕಿತರಿಗೆ ಕೊರೊನಾ ಹೇಗೆ ತಗುಲಿದೆ ಎಂಬುವುದೇ ಗೊತ್ತಾಗುತ್ತಿಲ್ಲ. ರೋಗಿ ನಂಬರ್ 465: 45 ವರ್ಷದ ಹಂಪಿ ನಗರದ ನಿವಾಸಿಯಾಗಿರುವ ಮಹಿಳೆ ವಿದೇಶ ಪ್ರಯಾಣ ಬೆಳೆಸಿಲ್ಲ ಮತ್ತು ಯಾವ …

Read More »

ಸ್ವಯಂಚಾಲಿತ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಯಂತ್ರ-ಕೆಎಲ್‍ಇ ವಿದ್ಯಾರ್ಥಿಗಳ ಸಂಶೋಧನೆ

ಹುಬ್ಬಳ್ಳಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವುದು ಸವಾಲಾಗಿ ಪರಿಣಮಿಸಿದ್ದು, ಸ್ಪರ್ಶದಿಂದಲೇ ಹರಡುವ ರೋಗವನ್ನು ತಡೆಯಲು ವಿವಿಧ ರೀತಿಯ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಅದೇ ರೀತಿ ಇದೀಗ ಹುಬ್ಬಳ್ಳಿಯ ಕೆಎಲ್‍ಇ ಕಾಲೇಜಿನ ವಿದ್ಯಾರ್ಥಿಗಳು ಸೆನ್ಸಾರ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಯಂತ್ರವನ್ನು ಸಂಶೋಧಿಸಿದ್ದಾರೆ.ಕೊರೊನಾದಿಂದ ರಕ್ಷಿಸಿಕೊಳ್ಳಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅಗತ್ಯವಾಗಿದ್ದು, ಆದರೂ ಕೆಲವೊಮ್ಮೆ ನಮಗೆ ಅರಿವಿಲ್ಲದೆಯೇ ವೈರಸ್ ಹರಡುವ ಸಾಧ್ಯತೆ ಇರುತ್ತದೆ. ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ …

Read More »

ಕೋಟಿಗೊಬ್ಬ-3 ಚಿತ್ರ ತಂಡದಿಂದ ಸರ್ಪ್ರೈಸ್…..

ಬೆಂಗಳೂರು: ಲಾಕ್‍ಡೌನ್ ಸಮಯದಲ್ಲೂ ಕೋಟಿಗೊಬ್ಬ-3 ಚಿತ್ರ ತಂಡದಿಂದ ಹೊಸ ಸುದ್ದಿಗಳು ಹೊರ ಬರುತ್ತಿದ್ದು, ಇದೀಗ ಅಭಿಮಾನಿಗಳಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಮುಂದಾಗಿದೆ. ಟೀಸರ್ ಮೂಲಕ ಹುಚ್ಚು ಹಿಡಿಸಿದ್ದ ಚಿತ್ರ ತಂಡ ಇದೀಗ ಅಭಿಮಾನಿಗಳ ನಿರೀಕ್ಷೆಯಂತೆ ಹೊಸ ಸುದ್ದಿಯನ್ನು ಕೊಟ್ಟಿದ್ದು, ಸಂತಸ ಮೂಡಿಸಿದೆ. ಹೌದು ಲಾಕ್‍ಡೌನ್ ಹೊತ್ತಲ್ಲಿ ಕೋಟಿಗೊಬ್ಬ-3 ಚಿತ್ರತಂಡ ಕಿಕ್ಕೇರಿಸುತ್ತಿದ್ದು, ಚಿತ್ರದ ಟೈಟಲ್ ಟ್ರ್ಯಾಕ್‍ನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡುತ್ತಿದೆ. ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರದ ಶೂಟಿಂಗ್ ಮುಗಿದು …

Read More »

ಚೀನಿಯರು ಇದೇನಪ್ಪಾ ಮಾಡಿದ್ರು..?’- ಲಾಕ್‍ಡೌನ್ ಬಗ್ಗೆ ರೋಹಿತ್ ಶರ್ಮಾ ಬೇಸರ

ಮುಂಬೈ: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆದಾಗಲೇ 2020ರ ಐಪಿಎಲ್ ಆವೃತ್ತಿ ಆರಂಭವಾಗಿ ಅಭಿಮಾನಿಗಳಿಗೆ ಭರಪೂರ ಮನರಂಜನೆ ಲಭಿಸುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಟೂರ್ನಿ ಮುಂದೂಡಲಾಗಿದ್ದು, ಅಭಿಮಾನಿಗಳು ಸೇರಿದಂತೆ ಹಲವು ಕ್ರಿಕೆಟ್ ಆಟಗಾರರು ಈ ಕುರಿತು ಬೇಸರಗೊಂಡಿದ್ದಾರೆ. ಲಾಕ್‍ಡೌನ್‍ನಿಂದಾಗಿ ಮನೆಯಲ್ಲೇ ಉಳಿದಿರುವ ಹಲವು ಆಟಗಾರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇತ್ತ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಇನ್‍ಸ್ಟಾ ಮೂಲಕ ಅಭಿಮಾನಿಗಳೊಂದಿಗೆ ಸಾಕಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ …

Read More »

ಬೆಂಗಳೂರು:ಎಣ್ಣೆ ಸೀಜ್ ಮಾಡಿದ್ದಕ್ಕೆ ಎಸಿಪಿಯೇ ಅಮಾನತು………

ಬೆಂಗಳೂರು: ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ಸೀಜ್ ಮಾಡಿದ್ದ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿಯನ್ನೇ ಅಮಾನತು ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿ ವಾಸು ಅವರನ್ನು ಅಡಿಷನಲ್ ಕಮಿಷನರ್ ಮುರುಗನ್ ಅಮಾನತುಗೊಳಿಸಿದ್ದಾರೆ. ತನ್ನ ಮಾತಿಗೆ ಬೆಲೆ ಕೊಟ್ಟಿಲ್ಲವೆಂದು ನನ್ನನ್ನು ಅಡಿಷನಲ್ ಕಮಿಷನರ್ ಮುರುಗನ್ ಸಸ್ಪೆಂಡ್ ಮಾಡಿದ್ದಾರೆ ಎಂದು ಎಸಿಪಿ ವಾಸು ಆರೋಪಿಸಿದ್ದಾರೆ. ಅಡಿಷನಲ್ ಕಮಿಷನರ್ ಮುರುಗನ್ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ ತಡೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಕೊರೊನಾ ಸೋಂಕಿನಿಂದ …

Read More »