Breaking News

Monthly Archives: ಏಪ್ರಿಲ್ 2020

ಚನ್ನಣ್ಣವರ್ ಬಗ್ಗೆ ಸಿಎಂ ಬಳಿ ನಾನು ದೂರಿಲ್ಲ:ಲಕ್ಷ್ಮಣ ಸವದಿ

ಬೆಂಗಳೂರು – ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ  ರವಿ  ಚನ್ನಣ್ಣನವರ್ ಅವರ ವಿರುದ್ಧ ನಾನು   ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸೋಶಿಯಲ್ ಮೀಡಿಯಾಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು  ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.  ರವಿಚನ್ನಣ್ಣವರ್ ಅವರೊಬ್ಬ ಒಳ್ಳೆಯ  ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ  ವಿನ: ಅವರು …

Read More »

ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕಳೆದ ಜನೆವರಿಯಿಂದ ಬೆಂಗಳೂರಿನಲ್ಲಿರುವ  ಕೆಎಂಎಫ್ ಚೇರಮನ್  ಬಾಲಚಂದ್ರ ಜಾರಕಿಹೊಳಿ, ಕೊರೋನಾ ಹಿನ್ನೆಲೆಯಲ್ಲಿ ಸೋಮವಾರ ದೂರವಾಣಿ ಮೂಲಕ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದರು. ಮೂಡಲಗಿಯ ಈರಣ್ಣ ದೇವಸ್ಥಾನದ ಆವರಣದಲ್ಲಿ ಸೋಮವಾರ ದೂರವಾಣಿ ಮೂಲಕ ಮೂಡಲಗಿ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಲಾಕ್ ಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪ್ರಸ್ತುತ ವಿಶ್ವದಾದ್ಯಂತ ಕಾಡುತ್ತಿರುವ ಪ್ರಬಲ ಕೊರೋನಾ ವೈರಸ್ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ …

Read More »

ಕೊಪ್ಪಳ:ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದನ್ನು ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ದಾಳಿ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ವೆಂಕಟಾಪುರ ಮತ್ತು ತುಮರಿಕೊಪ್ಪ ಗ್ರಾಮಗಳ ತಾಂಡ ಬಳಿ ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದನ್ನು ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ, ಅಲ್ಲಿದ್ದ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ಕಳ್ಳಭಟ್ಟಿ ತಯಾರಿಕಾ ಘಟಕದ ಮೇಲೆ ತಹಶೀಲ್ದಾರ್‌ ಎಂ.ಸಿದ್ದೇಶ್ ನೇತೃತ್ವದಲ್ಲಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು. ಅಬಕಾರಿ ಇಲಾಖೆ, ಕಂದಾಯ, ಮತ್ತು ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಕಳ್ಳಭಟ್ಟಿ ತಯಾರಿಕೆ …

Read More »

ನಿಗದಿತ ಸಮಯದಲ್ಲಿ ಕಿರಾಣಿ ,ದಿನಸಿ ವಸ್ತುಗಳನ್ನು ವಿತರಿಸಿ : ಪ್ರಕಾಶ ಹೋಳೆಪ್ಪಗೋಳ ವಾರ್ನಿಂಗ್

ಗೋಕಾಕ: ನಿಗದಿತ ಸಮಯದಲ್ಲಿ ಕಿರಾಣಿ ,ದಿನಸಿ ವಸ್ತುಗಳನ್ನು ವಿತರಿಸಿ : ಪ್ರಕಾಶ ಹೋಳೆಪ್ಪಗೋಳ ವಾರ್ನಿಂಗ್ ಲಾಕಡೌನ ಸಂದರ್ಭದಲ್ಲಿ ನಿಗದಿತ ಸಮಯದಲ್ಲಿ ಕಿರಾಣಿ ,ದಿನಸಿ ವಸ್ತುಗಳನ್ನು ವಿತರಿಸಿ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಯ್ದುಕೋಳುವಂತೆ ಅಂಗಡಿಕಾರರು ನಿಗಾ ವಹಿಸಬೇಕು ಎಂದು ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ ‌ಹೇಳಿದರು ‌ಸೋಮವಾರದಂದು ಇಲ್ಲಿನ ಮಿನಿ ವಿಧಾನ‌ಸೌಧದಲ್ಲಿ ಕರೆದಿದ್ದ ಕಿರಾಣಿ ಮತ್ತು ಕಾಯಿಪಲ್ಲೆ ವ್ಯಾಪಾರಸ್ಥರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು ಕೆಳೆದ 21 ದಿನಗಳಿಂದ ನಗರದ ಸಾರ್ವಜನಿಕರಿಗೆ ಯಾವುದೆ …

Read More »

ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ 5 ಕೋಟಿ ನೀಡಿದ ಸುಂದರ್ ಪಿಚೈ

ನವದೆಹಲಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಗೂಗಲ್ ಕಂಪನಿಯ ಸಿಇಒ ಸುಂದರ್ ಪಿಚೈ ಅವರು 5 ಕೋಟಿ ದೇಣಿಗೆ ನೀಡಿದ್ದಾರೆ. ಕೊರೊನಾ ಮಹಾಮಾರಿ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಭಾರತದಲ್ಲೂ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದೆ. ಇದರ ವಿರುದ್ಧ ಹೋರಾಡಲು ಸರ್ಕಾರಗಳು ಬಹಳ ಕಷ್ಟಪಡುತ್ತಿವೆ. ಈ ಹೋರಾಟದಲ್ಲಿ ಸರ್ಕಾರದ ಕೈಯನ್ನು ಬಲಪಡಿಸಲು ಕೆಲ ಉದ್ಯಮಿಗಳು ಸರ್ಕಾರಕ್ಕೆ ದೇಣಿಗೆ ರೂಪದಲ್ಲಿ ಸಹಾಯ ಮಾಡುತ್ತಿದ್ದಾರೆ. ಅಂತಯೇ ಸುಂದರ್ ಪಿಚೈ ಅವರು ಕೂಡ ಸರ್ಕಾರೇತರ ಸಂಸ್ಥೆಯಾದ ಗಿವ್‍ಇಂಡಿಯಾ ಐದು …

Read More »

ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ, ಬಡವರನ್ನು ಬದುಕಿಸಿಕೊಳ್ಳಲು ಸ್ಥಿತಿವಂತರು ಸಹಾಯ ಮಾಡಿ: ಡಿಸಿಎಂ ಕಾರಜೋಳ

ಚಿತ್ರದುರ್ಗ: ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಸ್ಥಿತಿವಂತರು ಬಡವರನ್ನು ಬದುಕಿಸಿಕೊಳ್ಳಲು ಆರ್ಥಿಕ ಸಹಾಯ ಮಾಡಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೇಳಿಕೊಂಡಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನೆರೆ ಹಾವಳಿ, ಬರಗಾಲ ಸೇರಿದಂತೆ ಒಂದಲ್ಲಾ ಒಂದು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಇದೆಲ್ಲವನ್ನೂ ಮುಗಿಸಿಕೊಂಡು 2020ರಲ್ಲಿ ಹೊಸ ಹೊಸ ಯೋಜನೆಗಳನ್ನು ರೂಪಿಸೋಣ ಎಂದಾಗ ಈ ಮಹಾಮಾರಿ ಕೊರೊನಾ ವೈರಸ್ ಅಂಟಿಕೊಂಡಿದೆ. ಈ ಕೊರೊನಾ ನಿರ್ಮೂಲನೆ …

Read More »

ಚೀನಾದಲ್ಲಿ ಸಾವಿನ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ಡೆಡ್ಲಿ ಕೊರೋನಾ..!

ಬೀಜಿಂಗ್,ಏ.13-ಚೀನಾದಲ್ಲಿ ಮತ್ತೆ ಕೊರೊನಾದ 2ನೇ ತರಂಗ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ ರಾಷ್ಟ್ರದಲ್ಲಿ 108 ಹೊಸ ಪ್ರಕರಣ ಪತ್ತೆ ಮಾಡಲಾಗಿದೆ. ಕಳೆದ ಮಾರ್ಚ್‍ನಿಂದೀಚೆಗೆ ದಿನ ದಿನ ಇಷ್ಟು ದೊಡ್ಡ ಮಟ್ಟದಲ್ಲಿ ಸೋಮಕು ದಾಖಲಾಗಿರುವುದು ಜನರಲ್ಲಿ ಮತ್ತೆ ಆತಂಕಕ್ಕೆ ದೂಡುವಂತಾಗಿದೆ. ದೇಶದ ಹಲವು ನಗರಗಳಲ್ಲಿ ಲಾಕ್‍ಡೌನ್ ಹಿಂಪಡೆದು ವಿಮಾನಯಾನ ಸೇವೆ ಆರಂಭವಾಗಿದೆ. ಹಲವು ವಿದೇಶಿಯರು ಚೀನಾಗೆ ಬರುತ್ತಿದ್ದಾರೆ. ಇದರ ನಡುವೆ ಹೊಸ ಕೊರೊನಾ ಪ್ರಕರಣಗಳು ಬೀಜಿಂಗ್‍ಗೆ ಎಚ್ಚರಿಕೆ ಗಂಟೆಯಾಗಿದೆ. # ಸಿಂಗಪುರ್‍ನಲ್ಲಿ …

Read More »

ಆರ್ಥಿಕ ಪರಿಸ್ಥಿತಿ ನಿಭಾಯಿಸಲು 12 ಸಾವಿರ ನಿವೇಶನಗಳ ಹರಾಜಿಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು : ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಲಾಕ್ ಡೌನ್ ಅನುಷ್ಠಾನ ಮಾಡಿದ ಪರಿಣಾಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದರಿಂದ ಬಿಡಿಎ ವ್ಯಾಪ್ತಿಯಲ್ಲಿ 12 ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 12 ಸಾವಿರ ನಿವೇಶನಗಳನ್ನು ಮಾರಾಟ ಮಾಡುವುದರಿಂದ ಸುಮಾರು15 ಸಾವಿರ ಕೋಟಿ‌ ರೂ ಆದಾಯ ನಿರೀಕ್ಷೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಡಿಯಲ್ಲಿ ತಿಳಿಸಿದರು.ಅನಧಿಕೃತ ಕಟ್ಟಡಗಳ ಸಂಬಂಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಕ್ರಮ …

Read More »

ಇಟಲಿಯಲ್ಲೂ 20,000 ಜನರ ಕೊಂದ ಕಿಲ್ಲರ್ ಕೊರೊನಾ..!

ರೋಮ್/ವಾಷಿಂಗ್ಟನ್, ಏ.13-ಸೂಪರ್ ಪವರ್ ರಾಷ್ಟ್ರ ಅಮೆರಿಕದಲ್ಲಿ 20,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕಿಲ್ಲರ್ ಕೊರೊನಾ ಇಟಲಿಯಲ್ಲಿಯೂ ಅದೇ ತೀವ್ರತೆಯ ರುದ್ರನರ್ತನ ಮುಂದುವರಿಸಿದೆ. ಇಲ್ಲಿಯೂ ಕೂಡ ಸತ್ತವರ ಸಂಖ್ಯೆ 20,000 ದಾಟಲಿರುವುದು ಆತಂಕದ ಸಂಗತಿಯಾಗಿದೆ. ಇಟಲಿಯಲ್ಲಿ ನಿನ್ನೆ ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 24 ತಾಸುಗಳ ಅವಧಿಯಲ್ಲಿ 620ಕ್ಕೂ ಅಧಿಕ ಸೋಂಕಿತರು ಅಸುನೀಗಿದ್ದಾರೆ.ಇಟಲಿಯಲ್ಲಿ ನಿನ್ನೆ ರಾತ್ರಿವರೆಗೆ ದೊರೆತ ಅಂಕಿ -ಅಂಶಗಳ ಪ್ರಕಾರ 19,468 ಮಂದಿ ಬಲಿಯಾಗಿದ್ದು, …

Read More »

ಕ್ವಾರೆಂಟೈನ್ ಟೈಂನಲ್ಲಿ ‘ಪಕೋಡಾ’ ಹುಡುಕಿದ ಅಗ್ನಿಸಾಕ್ಷಿ ತಂಡ

ಬೆಂಗಳೂರು: ಬಾಲಿವುಡ್ ಬಿಗ್‍ಬಿ ಅಮಿತಾಬ್ ಬಚ್ಚನ್ ನೇತೃತ್ವದಲ್ಲಿ ಬಹುಭಾಷಾ ನಟರ ತಂಡ ಈ ಹಿಂದೆ ಮನೆಯಲ್ಲೇ ಇದ್ದುಕೊಂಡು ಶಾರ್ಟ್ ಫಿಲ್ಮ್ ಮಾಡುವ ಮೂಲಕ ಸಾಮಾಜಿಕ ಅಂತರದ ಮಹತ್ವವನ್ನು ಸಾರಿತ್ತು. ಈ ಚಿತ್ರ ಇತರರಿಗೆ ಪ್ರೇರಣೆಯಾಗಿತ್ತು ಸಹ. ಅದೇ ರೀತಿ ಇದೀಗ ಅಗ್ನಿಸಾಕ್ಷಿ ಧಾರಾವಾಹಿ ತಂಡ ಸಹ ಇಂತಹದ್ದೇ ಪ್ರಯತ್ನವನ್ನು ಮಾಡಿದ್ದು, ಫನ್ನಿಯಾಗಿರುವ ಕಥೆಯನ್ನಿಟ್ಟುಕೊಂಡು ಜನತೆಯನ್ನು ನಗಿಸಿದ್ದಾರೆ. ಬಿಗ್‍ಬಿ ನೇತೃತ್ವದಲ್ಲಿ ಮಾಡಿದ ಶಾರ್ಟ್ ಫಿಲ್ಮ್‍ನಲ್ಲಿ ಕನ್ನಡಕ ಹುಡುಕುವ ಕಾನ್ಸೆಪ್ಟ್ ಇತ್ತು. ಆದರೆ …

Read More »