ಚಿತ್ರದುರ್ಗ: ಕೊರೊನಾ ನಡುವೆಯೂ ಎರಡು ಜಿಲ್ಲಾಡಳಿತಗಳ ಎಡವಟ್ಟಿನಿಂದ ವಯೋವೃದ್ಧ ಬೀದಿಪಾಲಾಗಿರುವ ಮನಕಲಕುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಮಾರ್ಚ್ ತಿಂಗಳಲ್ಲಿ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಹೊರಟಿದ್ದ ಶಿವಮೂರ್ತಿ ಅವರನ್ನು ತಡೆದ ಮಂಡ್ಯ ಜಿಲ್ಲಾಡಳಿತ 30 ದಿನಗಳ ಕಾಲ ಕ್ವಾರಂಟೈನ್ ಮಾಡಿತ್ತು. ಬಳಿಕ ಅವರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸ್ವ-ಗ್ರಾಮಕ್ಕೆ ಶಿವಮೂರ್ತಿಯವರನ್ನು ಕಳುಹಿಸುವ ಬದಲಾಗಿ ಸರ್ಕಾರಿ ವಾಹನದಲ್ಲಿ ಚಿತ್ರದುರ್ಗಕ್ಕೆ ಕಳುಹಿಸಿದೆ. ಅಲ್ಲದೇ ಅಧಿಕಾರಿಗಳ ಎಡವಟ್ಟಿನಿಂದಾಗಿ ಚಿತ್ರದುರ್ಗಕ್ಕೆ ಬಂದ ಶಿವಮೂರ್ತಿ ಅವರನ್ನು ಅಲ್ಲೂ …
Read More »Daily Archives: ಮೇ 17, 2020
ತಬ್ಲಿಘಿಗಳ ನಂತರ ಮಲೆನಾಡಿಗೆ ಮುಂಬೈ ನಂಟಿನ ಕಂಟಕ……….
ಶಿವಮೊಗ್ಗ: ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದ ದಿನದಿಂದಲೂ ಮಲೆನಾಡಿನ ಶಿವಮೊಗ್ಗ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಒಂದೂ ಪಾಸಿಟಿವ್ ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ ಇದೀಗ ಒಂದೆಡೆ ಅಹಮದಾಬಾದ್‍ನ ತಬ್ಲಿಘಿಗಳು, ಮತ್ತೊಂದೆಡೆ ಮುಂಬೈನಿಂದ ಬಂದ ವಲಸೆ ಕಾರ್ಮಿಕರು ಮಲೆನಾಡಿನ ಮಂದಿಗೆ ಕಂಟಕವಾಗಿ ಕಾಡುತ್ತಿದ್ದಾರೆ. ಹೀಗಾಗಿ ಇಂದು ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12ಕ್ಕೇರಿದೆ. ಕೊರೊನಾ ಕಾಣಿಸಿಕೊಂಡ ಆರಂಭದಿಂದಲೂ ಜಿಲ್ಲೆ ಹಸಿರು ವಲಯದಲ್ಲಿತ್ತು. ಸರ್ಕಾರ ಲಾಕ್‍ಡೌನ್ ಸಡಿಲಗೊಳಿಸಿದ …
Read More »ಮುಂಬೈನಿಂದ ಬಂದವರ ಕ್ವಾರಂಟೈನ್- ಅಂಬುಲೆನ್ಸ್‌ಗೆ ಕಲ್ಲು ತೂರಾಟ…………
ಹಾಸನ: ಮುಂಬೈನಿಂದ ಬಂದವರನ್ನು ಜಿಲ್ಲೆಯ ಹೊಳೆನರಸೀಪುರದಲ್ಲಿ ಕ್ವಾರಂಟೈನ್ ಮಾಡುತ್ತಿರುವುದಕ್ಕೆ ವಿರೋಧಿಸಿ ಅಂಬ್ಯುಲೆನ್ಸ್ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೇವರ ಮುದ್ದನಹಳ್ಳಿ ಬಳಿ ಘಟನೆ ನಡೆದಿದ್ದು, ಮುಂಬೈನಿಂದ ಬಂದವರನ್ನು ಇಲ್ಲಿ ಕ್ವಾರಂಟೈನ್ ಮಾಡಿದರೆ ಹಳ್ಳಿಯ ಜನರಿಗೂ ಕೊರೊನಾ ಬರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ವಾರಂಟೈನ್ ಮಾಡಲು ಕರೆದೊಯ್ದಿದ್ದ ಆಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೇ.15ರಂದು ಮುಂಬೈನಿಂದ ಬಂದಿದ್ದ ಒಂದೇ ಕುಟುಂಬದ ನಾಲ್ವರನ್ನು …
Read More »ಸಾಮೂಹಿಕ ವಿಶೇಷ ಪ್ರಾರ್ಥನೆಗೆ ಬಿಎಸ್‍ವೈಗೆ ಪತ್ರ ಬರೆದ ಶಾಸಕ ಹ್ಯಾರಿಸ್……….
ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಬೆನ್ನಲ್ಲೇ ಶಾಸಕ ಎನ್.ಎ.ಹ್ಯಾರಿಸ್ ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಇಬ್ರಾಹಿಂ ಅವರ ಪತ್ರಕ್ಕೆ ಕಾಂಗ್ರೆಸ್‍ನ ಮುಸ್ಲಿಂ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಿದ್ದರೂ ಶಾಸಕ ಹ್ಯಾರಿಸ್ ಅವರು ಸಾಮೂಹಿಕ ಪ್ರಾರ್ಥನೆಗೆ ಪತ್ರ ಬರೆದಿರುವುದು ಚರ್ಚೆಗೆ ಕಾರಣವಾಗಿದೆ. ಪತ್ರದಲ್ಲಿ ಏನಿದೆ?: ಮುಸ್ಲಿಂ ಬಾಂಧವರು ಚಂದ್ರ ದರ್ಶನ ನಂತರ ಮೇ …
Read More »ಬಳ್ಳಾರಿ ರೈಲು ನಿಲ್ದಾಣದಿಂದ ತೆರಳಿದ ವಲಸಿಗರಿಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ
ಬಳ್ಳಾರಿ: ಶ್ರಮಿಕ್ ವಿಶೇಷ ರೈಲಿನ ಮೂಲಕ 1,452 ಜನ ಬಿಹಾರಿ ವಲಸೆ ಕಾರ್ಮಿಕರು ತಮ್ಮ ತವರಿನತ್ತ ತೆರಳಿದರು. ಸುರಕ್ಷಿತವಾಗಿ ಊರು ತಲುಪಿ ಮತ್ತೆ ಬಳ್ಳಾರಿಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್‍ಪಿ ಸಿ.ಕೆ.ಬಾಬಾ, ಜಿ.ಪಂ. ಸಿಇಒ ಕೆ.ನಿತೀಶ್ ಸೇರಿದಂತೆ ಅನೇಕರು ಶುಭಹಾರೈಸಿ ಬೀಳ್ಕೊಟ್ಟರು. ಬಳ್ಳಾರಿ, ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಬಿಹಾರದ 1,452 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ …
Read More »
Laxmi News 24×7