ಗೋಕಾಕ :ಸಚಿವರಾದ ರಮೇಶ ಜಾರಕಿಹೊಳಿ ಅವರು ವಯಕ್ತಿಕವಾಗಿ ನೀಡಿದ ಆಹಾರದ ಕಿಟಗಳನ್ನು ಇನ್ನೇರೆಡು ದಿನಗಳಲ್ಲಿ ಗೋಕಾಕ ಮತಕ್ಷೇತ್ರದ ಪ್ರತಿ ಮನೆಗಳಿಗೆ ತಲುಪಿಸಲಾಗುವದೆಂದು ನಗರಸಭೆ ಸದಸ್ಯ ಎಸ್.ಎ ಕೊತವಾಲ ಹೇಳಿದರು ಬುಧವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಕರೆದ ಆಹಾರ ಕಿಟ ವಿತರಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಮಹಾಮಾರಿ ಕೊರೋನಾ ವೈರಸ್ ನಿಂದ ಸಂಕಷ್ಟಗೋಳಲಾದ ಕ್ಷೇತ್ರದ ಜನರಿಗೆ ಸಚಿವರು ವಯಕ್ತಿಕವಾಗಿ ಆಹಾರ ಕಿಟಗಳನ್ನು ನೀಡುತ್ತಿದ್ದಾರೆ ಜನಪ್ರತಿನಿಧಿಗಳು , ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ …
Read More »Daily Archives: ಮೇ 20, 2020
ಇಂದು ಇಬ್ಬರು ಕೊವಿಡ್ ಸೊಂಕೀತರು ಗುಣಮುಖ, ಬಿಡುಗಡೆ: ಕುಡಚಿ ಪಟ್ಟಣ ಈಗ ಕೋರಾನಾ ಮುಕ್ತ
ಬೆಳಗಾವಿ:ಕೋವಿಡ್-೧೯ ಸೋಂಕು ತಗುಲಿದ್ದ ಮಹಿಳೆಯು ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದಬಿಡುಗಡೆಮಾಡಲಾಗಿದೆ. ಈ ಮೂಲಕ ಈಗ ಕುಡಚಿ ಪಟ್ಟಣ ಕೊರೋನಾ ಮುಕ್ತವಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಒಟ್ಟು ಹದಿನೆಂಟು ಕೊರೋನಾ ಸೊಂಕೀತರ ಪತ್ತೆಯಾಗಿದ್ದರು. ಇವತ್ತು ಇಬ್ಬರು ಗುಣಮುಖರಾದ ಬಳಿಕ ಮನೆಗೆ ಸೇರಿದ್ದು …
Read More »ಬೆಂಗಳೂರನ್ನು ಬೆಚ್ಚಿಬೀಳಿಸಿದ ಭಯಂಕರ ಶಬ್ದದ ರಹಸ್ಯ ಇಲ್ಲಿದೆ ನೋಡಿ..!
ಬೆಂಗಳೂರು, ಮೇ 20- ನಗರದ ಹಲವು ಪ್ರದೇಶಗಳಲ್ಲಿ ಇಂದು ಮಧ್ಯಾಹ್ನ ಭಾರೀ ಶಬ್ದ ಕೇಳಿಬಂದಿದ್ದು, ಜನರು ಭಯಭೀತರಾಗಿದ್ದರು. ಈ ಶಬ್ದಕ್ಕೆ ಸುಖೋಯ್(ಎಸ್‍ಯು30) ಯುದ್ಧ ವಿಮಾನದ ಸದ್ದು ಎಂದು ತಿಳಿದುಬಂದಿದೆ. ಶಬ್ದಕ್ಕಿಂತ ಹೆಚ್ಚು ವೇಗವಾಗಿ ಚಲಿಸುವಂತಹ ಭಾರತೀಯ ವಾಯುಪಡೆಯ ರಷ್ಯಾ ನಿರ್ಮಿತ ಸೂಪರ್ ಸೋನಿಕ್ ಯುದ್ದವಿಮಾನದ ಶಬ್ದವಾಗಿದೆ ಎಂದು ಹೇಳಲಾಗಿದೆ. ಮಧ್ಯಾಹ್ನ 1.20ರಿಂದ 1.30ರ ಗಂಟೆಯಲ್ಲಿ ಹೆಚ್‍ಎಸ್‍ಆರ್ ಲೇಔಟ್, ಮಾರ್ತಹಳ್ಳಿ, ಸಿ.ವಿ.ರಾಮನಗರ, ವರ್ತೂರು, ಕುಂದಲಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹಲಸೂರು, ವೈಟ್‍ಫೀಲ್ಡ್, ಟಿನ್ …
Read More »ನಾಳೆಯಿಂದ ದ್ವಿತೀಯ ಪಿಯುಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಆರಂಭ
ಬೆಂಗಳೂರು, ಮೇ 20- ನಾಳೆಯಿಂದ ದ್ವಿತೀಯ ಪಿಯುಸಿಯ ಉತ್ತರಪತ್ರಿಕೆಗಳ ಮೌಲ್ಯಮಾಪನವು ಆಯ್ದ ಕೇಂದ್ರಗಳಲ್ಲಿ ಆರಂಭವಾಗಲಿದೆ. ಮೌಲ್ಯಮಾಪನಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದ್ದು, ಇಂಗ್ಲೀಷ್ ಹೊರತುಪಡಿಸಿ ಇತರ ಪತ್ರಿಕೆಗಳ ಮೌಲ್ಯಮಾಪನವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಮುಂದಾಗಿದೆ. ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯ ದಿನಾಂಕ ಜೂನ್ 18ಕ್ಕೆ ನಿಗದಿಪಡಿಸಲಾಗಿದ್ದು, ಪರೀಕ್ಷೆಗೂ ಮುನ್ನವೇ ಮೌಲ್ಯಮಾಪನ ಪೂರ್ಣಗೊಳಿಸಲು ಇಲಾಖೆ ಉದ್ದೇಶಿಸಿದೆ ಎಂದು ತಿಳಿದುಬಂದಿದೆ. ಆದರೆ, ಶಿಕ್ಷಣ ಇಲಾಖೆ ಅಧಿಕೃತವಾಗಿ ಮೌಲ್ಯಮಾಪನಕ್ಕೆ ಯಾವುದೇ ರೀತಿಯ …
Read More »ಭಾರತಕ್ಕೆ ಕೊರೊನಾ-ಅಂಫನ್ ಕಂಟಕ : ಸಚಿವರ ಜತೆ ಪ್ರಧಾನಿ ಚರ್ಚೆ…..
ನವದೆಹಲಿ, ಮೇ 20- ದೇಶಾದ್ಯಂತ ಕೊರೊನಾ ವೈರಸ್ ಸೋಂಕು ಮತ್ತು ಸಾವು ಪ್ರಕರಣ ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಮತ್ತೊಂದೆಡೆ ಕೆಲವು ರಾಜ್ಯಗಳ ಮೇಲೆ ಅಂಫನ್ ಚಂಡಮಾರುತ ಅಪ್ಪಳಿಸುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಬೆಳಗ್ಗೆ ದೆಹಲಿಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಕೋವಿಡ್-19 ವೈರಸ್‍ನ್ನು ಪರಿಣಾಮಕಾರಿಯಾಗಿ ನಿಗ್ರಹಿಸುವುದು ಮತ್ತು ಸೂಪರ್ ಸೈಕ್ಲೋನ್‍ನಿಂದ ಉಂಟಾಗಬಹುದಾದ ಹಾನಿಯನ್ನು ತಡೆಗಟ್ಟುವ ಸಂಬಂಧ ಪ್ರಧಾನಿ ಸಂಪುಟ ಸಹೋದ್ಯೋಗಿಗಳೊಂದಿಗೆ ಸಭೆ …
Read More »ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ಏಳು ತಿಂಗಳ ಗರ್ಭಿಣಿ ನರಳಾಟ……….
ಉಡುಪಿ: ಮಹಾರಾಷ್ಟ್ರದಿಂದ ಉಡುಪಿಗೆ ಹೊರಟ 7 ತಿಂಗಳ ಗರ್ಭಿಣಿ ಕಳೆದ ಎರಡು ದಿನದಿಂದ ಕರ್ನಾಟಕದ ಗಡಿಯಲ್ಲಿ ನರಳಾಟ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲಾಧಿಕಾರಿಯ ಅನುಮತಿಗಾಗಿ ಬೆಳಗಾವಿ ಪೊಲೀಸರು ಕಾಯುತ್ತಿದ್ದಾರೆ. ಮಹಾರಾಷ್ಟ್ರದಿಂದ ಮೂರು ದಿನದ ಹಿಂದೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 30 ಜನ ಹೊರಟಿದ್ದರು. ಮಹಾರಾಷ್ಟ್ರದ ಪಾಸ್ ಪಡೆದಿದ್ದ ಈ ಗುಂಪು, ಕರ್ನಾಟಕ ಪ್ರವೇಶದ ಸೇವಾಸಿಂಧು ಪಾಸ್ ಪಡೆದಿರಲಿಲ್ಲ. ಹಾಗಾಗಿ ರಾಜ್ಯದೊಳಗೆ ಪ್ರವೇಶ ಸಾಧ್ಯವಾಗುತ್ತಿಲ್ಲ. ನಿಪ್ಪಾಣಿಯಲ್ಲಿ ಕಳೆದ ಎರಡು ದಿನಗಳಿಂದ …
Read More »ಇಂದು 67 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 1,462ಕ್ಕೆ
ಬೆಂಗಳೂರು: ರಾಜ್ಯದ ಜನರಿಗೆ ಮಂಗಳವಾರ ಆತಂಕ ಸೃಷ್ಟಿಸಿದ್ದ ಕೊರೊನಾ ಸೋಂಕಿತರ ಸಂಖ್ಯೆಯು ಇಂದು ಇಳಿಕೆ ಕಂಡಿದೆ. ಇಂದು ರಾಜ್ಯದಲ್ಲಿ 67 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಇಂದು ಹಾಸನ 21, ಬೀದರ್ 10, ಮಂಡ್ಯ 8, ಉಡುಪಿ 6, ಕಲಬುರಗಿ 7, ಬೆಂಗಳೂರು, ತುಮಕೂರು, ರಾಯಚೂರಿನಲ್ಲಿ ತಲಾ 4, ಉತ್ತರ ಕನ್ನಡ, ದಕ್ಷಿಣ ಕನ್ನಡ, …
Read More »ಲಾಕ್‍ಡೌನ್ ಸಡಿಲಿಕೆಯಾದ ಹಿನ್ನೆಲೆ ಹಾವೇರಿಯಿಂದ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭ
ಹಾವೇರಿ: ಲಾಕ್‍ಡೌನ್ ಸಡಿಲಿಕೆಯಾದ ಹಿನ್ನೆಲೆ ಹಾವೇರಿಯಿಂದ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಪ್ರಯಾಣಿಕರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಬೆಳಗ್ಗೆ ಏಳೂವರೆಗೆ ಬಸ್ ಸಂಚಾರ ಆರಂಭವಾಗಿದೆ. ಆದರೆ ನಸುಕಿನಿಂದಲೇ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಕಾದು ಕುಳಿತಿದ್ದು, ಬೇರೆ ಜಿಲ್ಲೆಗಳ ಊರುಗಳಿಗೆ ತೆರಳಲು ನೂರಾರು ಜನ ಬಸ್ ನಿಲ್ದಾಣದಲ್ಲಿ ಜಮಾಯಿಸಿ, ಬಸ್ಸಿಗಾಗಿ ಕಾಯುತ್ತಿದ್ದರು. ಈ ವೇಳೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ. ಅಲ್ಲದೆ ಬಸ್ ಬರುತ್ತಿದ್ದಂತೆ ಪ್ರಯಾಣಿಕರು ಸಾಮಾಜಿಕ ಅಂತರ ಮರೆತು …
Read More »ಇಂದು ಲಾಕ್ ಫ್ರೀ ಎರಡನೇ ದಿನ ಉತ್ತರ ಕರ್ನಾಟಕದ ಭಾಗಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳ
ಬೆಂಗಳೂರು: ಇಂದು ಲಾಕ್ ಫ್ರೀ ಎರಡನೇ ದಿನವಾಗಿದ್ದು, ಉತ್ತರ ಕರ್ನಾಟಕದ ಭಾಗಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಮೆಜೆಸ್ಟಿಕ್ ನಿಲ್ದಾಣದತ್ತ ಪ್ರಯಾಣಿಕರು ಅಗಮಿಸುತ್ತಿದ್ದು, ಟಿಕೆಟ್‍ಗಾಗಿ ಸರತಿಯಲ್ಲಿ ನಿಂತಿದ್ದಾರೆ. ಸೋಮವಾರ ರಾತ್ರಿಯೇ ಬಸ್ ವ್ಯವಸ್ಥೆ ಇಂದು ಮೆಜೆಸ್ಟಿಕ್ ನಿಲ್ದಾಣಕ್ಕೆ ಹಲವರು ಬಂದಿದ್ದರು. ಆದ್ರೆ ಬಸ್ ಸಿಗದೇ ಇಡೀ ರಾತ್ರಿಯನ್ನು ಪ್ರಯಾಣಿಕರು ನಿಲ್ದಾಣದಲ್ಲಿಯೇ ಕಳೆಯುವಂತಾಗಿತ್ತು. ಇಂದು ಬಸ್ ಸಂಚಾರದಲ್ಲಿ ಕೆಲ ಬದಲಾವಣೆ ತರಲಾಗಿದ್ದು, ಸಂಜೆ 5 ಗಂಟೆ ಬದಲು 7 ಗಂಟೆವರೆಗೂ ಬಸ್‍ಗಳ ವ್ಯವಸ್ಥೆ …
Read More »
Laxmi News 24×7