ಧಾರವಾಡ: ಧಾರವಾಡದಲ್ಲಿ ಇಂದು ಭಾರೀ ಗಾಳಿ ಹಾಗೂ ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಸಿದೆ. ವರುಣನ ಅಬ್ಬರಕ್ಕೆ ನಗರದ ವಿವಿಧೆಡೆ ಮರಗಳು ಧರೆಗುರುಳಿದ್ದು, ಮರಗಳಡಿ ವಾಹನಗಳು ಸಿಲುಕಿ ಜಖಂ ಆಗಿವೆ. ನಗರದ ಸೈದಾಪುರ ಗೌಡರ ಓಣಿಯಲ್ಲಿ ಮನೆ ಮೇಲೆ ಮರ ಬಿದ್ದಿದ್ದು, ಸಿಬಿಟಿ ಬಳಿಯ ಅಂಜುಮನ್ ಕಾಂಪ್ಲೆಕ್ಸ್ ಎದುರು ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ರಸ್ತೆ ಸಂಚಾರಕ್ಕೆ ಅಡೆತಡೆಯಾಯಿತು. ನಗರದ ಟೊಲ್ ನಾಕಾ ರಸ್ತೆ ಮಳೆಯಿಂದ ಹಳ್ಳದಂತಾಗಿತ್ತು. ತುಂಬಿ ಹರಿಯುತ್ತಿರುವ ನೀರಿನಲ್ಲಿ …
Read More »Daily Archives: ಮೇ 23, 2020
ದಕ್ಷಿಣ ಕನ್ನಡ, ಉಡುಪಿಯಲ್ಲಿ ರವಿವಾರ ರಂಜಾನ್ ಹಬ್ಬ……….
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ರಂಜಾನ್ ಆಚರಿಸುವಂತೆ ಖಾಝಿಗಳು ಕರೆ ನೀಡಿದ್ದಾರೆ. ಮಂಗಳೂರಿನ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿಯ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ತಮ್ಮ ಜಿಲ್ಲೆಯ ಜನತೆಗೆ ಭಾನುವಾರ ಆಚರಿಸುವಂತೆ ಹೇಳಿದ್ದಾರೆ. ಇಂದು ರಾತ್ರಿ ಪ್ರಥಮ ಚಂದ್ರ ದರ್ಶನ ಎಲ್ಲೂ ಆಗಿಲ್ಲ. ಸಾಂದರ್ಭಿಕ ಚಿತ್ರ ಭಾನುವಾರವೇ ಈದುಲ್ ಫಿತ್ರ ಆಚರಿಸುವ ಸಾಧ್ಯತೆಗಳು ಹೆಚ್ಚಿದ್ದು, ಆದ್ರೆ ಸರ್ಕಾರ ಪ್ರತಿ ರವಿವಾರ ಸಂಪೂರ್ಣ ಲಾಕ್‍ಡೌನ್ …
Read More »ಕೋಲಾರದ ಚಿನ್ನದ ಕಳ್ಳನಿಗೂ ಕೊರೊನಾ- ಬಂಧಿಸಿದ ಪೊಲೀಸರಿಗೂ ಸೋಂಕಿನ ಭೀತಿ…..
ಕೋಲಾರ: ಚಿನ್ನದ ಕಳ್ಳರು ನೂರಾರು ಅಡಿ ಆಳದ ಗಣಿ ಪ್ರದೇಶದಲ್ಲಿ ಸಿಲುಕಿ ಭಾರೀ ಸುದ್ದಿಯಾಗಿದ್ದರು. ಗಣಿಗೆ ಇಳಿದಿದ್ದ ಐವರಲ್ಲಿ ಇಬ್ಬರು ಮಣ್ಣಾದರೆ, ಮತ್ತೋರ್ವನ ಶವ ಪಾತಾಳ ಸೇರಿದೆ. ಇದೀಗ ಗಣಿಯಿಂದ ಪಾರಾಗಿ ಬಂದ ಕಳ್ಳನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಜಿಎಫ್ ಚಿನ್ನದ ಗಣಿಯಲ್ಲಿ ಕಳ್ಳತನಕ್ಕೆ ಇಳಿದ 5 ಜನರಲ್ಲಿ 3 ಜನ ಮೃತಪಟ್ಟರೆ, ಮತ್ತೊಬ್ಬನಿಗೆ ಕೊರೊನಾ ವಕ್ಕರಿಸಿದೆ. ಕೋಲಾರದ ಕೆಜಿಎಫ್ ನಲ್ಲಿ ಮೇ-13 ರಂದು ರಾತ್ರಿ ಕೆಜಿಎಫ್ ನಗರದ …
Read More »ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ
ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಶುಕ್ರವಾರ ಸಂಜೆ 6.50ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಟ್ಟು 152 ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ …
Read More »
Laxmi News 24×7